ಜೀ಼ ಕನ್ನಡ ವಾಹಿನಿಯ ಸಂಬಂಧಗಳನ್ನು ಸಂಭ್ರಮಿಸುವ ಅತಿದೊಡ್ಡ ಹಬ್ಬ ‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025’ ಕ್ಷಣಗಣನೆ ಶುರುವಾಗಿದೆ. ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯುತ್ತಿದ್ದ ಎಂಟರ್ಟೈನ್ಮೆಂಟ್ ನ ಮಹಾಪರ್ವ ಇದೇ ತಿಂಗಳ 17, 18 ಮತ್ತು 19 ರಂದು ಜೀ಼ ಕನ್ನಡ ವಾಹಿನಿಯಲ್ಲಿ ಸಂಜೆ 6:30 ರಿಂದ ಪ್ರಸಾರವಾಗಲಿದೆ. ಖ್ಯಾತ ನಿರೂಪಕರಾದ ಅಕುಲ್ ಬಾಲಾಜಿ ಮತ್ತು ಅನುಶ್ರೀ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಈ ವರ್ಷದ ‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್ ನಲ್ಲಿ ಫೇವರಿಟ್ ನಟ, ಫೇವರಿಟ್ ನಟಿ, ಫೇವರಿಟ್ ಜೋಡಿ, ಫೇವರಿಟ್ ಸೀರಿಯಲ್, ಫೇವರಿಟ್ ರಿಯಾಲಿಟಿ ಶೋ ಮತ್ತು ಫೇವರಿಟ್ ನಿರೂಪಕ/ನಿರೂಪಕಿ ಅನ್ನುವ ಪ್ರಮುಖ 6 ಕೆಟಗರಿಗಳಿರಲಿವೆ. ಈ ವಿಭಾಗಗಳ ಜೊತೆಗೆ ಇನ್ನೂ ಅನೇಕ ವಿಭಾಗಗಳಲ್ಲಿ ವಿಜೇತರ ಘೋಷಣೆಯೂ ಇರಲಿದೆ. ಕನ್ನಡ ಚಲನಚಿತ್ರ ತಾರೆಯರು ಹಾಗು ಕಿರುತೆರೆ ಕಲಾವಿದರು ಜೊತೆಯಾಗಿ ಸೇರಿ ಸಂಭ್ರಮಿಸಿದ್ದು, ಇದರ ಮತ್ತೊಂದು ಆಕರ್ಷಣೆ. ನೆಚ್ಚಿನ ತಾರೆಯರು ಅವರ ಅವಿಸ್ಮರಣೀಯ ಸುಂದರ ಮತ್ತು ನೋವಿನ ಕ್ಷಣಗಳನ್ನು ಮೆಲುಕು ಹಾಕುತ್ತಾ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗಲಿದ್ದಾರೆ.
ಜೀ಼ ಕನ್ನಡ ಅವಾರ್ಡ್ 2025 ರಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ನಟಿ ರುಕ್ಮಿಣಿ ವಸಂತ್, ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದು, ಕಾರ್ಯಕ್ರಮದ ಮೆರುಗು ಹೆಚ್ಚಿಸಿತ್ತು. ವಿಶೇಷವಾಗಿ “ವೀಕೆಂಡ್ ವಿತ್ ರಮೇಶ್ ಮಿನಿಯೇಚರ್” ಕೂಡ ಇರಲಿದ್ದು, ರಿಷಬ್ ಶೆಟ್ಟಿ ಮತ್ತು ಹಿರಿಯ ನಟ ರಮೇಶ್ ಅವರ ಮಾತುಕತೆ ಮತ್ತೊಂದು ಹೈಲೈಟ್ ಆಗಿತ್ತು.
ಈ ಕುರಿತು ಮಾತನಾಡಿರುವ ಜೀ಼ ಕನ್ನಡ ಮತ್ತು ಕನ್ನಡ ಜೀ಼5 ನ ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು, “ಕನ್ನಡ ಟೆಲಿವಿಷನ್ ಕುಟುಂಬದ ಪ್ರತಿಭೆ, ಸೃಜನಶೀಲತೆ ಮತ್ತು ಅದ್ಭುತ ಆತ್ಮಸ್ಫೂರ್ತಿಯ ಆಚರಣೆಯೇ ಕುಟುಂಬ ಅವಾರ್ಡ್ಸ್. ಇನ್ನು ಜೀ಼ ಕನ್ನಡ 19 ವರ್ಷ ಪೂರೈಸಿದ್ದು, ವೀಕ್ಷಕರಿಗೆ ಇನ್ನಷ್ಟು ಮನರಂಜನೆ ಕೊಡುವುದು ನಮ್ಮ ಗುರಿಯಾಗಿತ್ತು. ಅದಕ್ಕೆ ಬದ್ಧವಾಗಿ ‘ನಾ ನಿನ್ನ ಬಿಡಲಾರೆ’, ‘ಕರ್ಣ’ ಮತ್ತು ‘ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಪ್ರಸಿದ್ಧ ಧಾರಾವಾಹಿಗಳ ಜೊತೆಗೆ ‘ನಾವು ನಮ್ಮವರು’ ಎಂಬ ವಿಭಿನ್ನ ರಿಯಾಲಿಟಿ ಶೋ ಜನರ ಮುಂದಿಟ್ಟಿದ್ದೇವೆ. ಇನ್ನು ನಮ್ಮ ವೀಕ್ಷಕರು ಈ ಎಲ್ಲಾ ಕಾರ್ಯಕ್ರಮಗಳನ್ನು ಮನಸಾರೆ ಮೆಚ್ಚಿದ್ದು ನಮ್ಮ ಹುರುಪನ್ನು ಮತ್ತಷ್ಟು ಹೆಚ್ಚಿಸಿದೆ. ಟೆಲಿವಿಷನ್ ಜೊತೆಗೆ OTT ಪ್ಲಾಟ್‌ಫಾರ್ಮ್ ಕನ್ನಡ ZEE5 “ನಮ್ಮ ಭಾಷೆ, ನಮ್ಮ ಕಥೆಗಳು” ಮೂಲಕ ಕನ್ನಡದ ಕಥೆಗಳಿಗೆ ಜೀವ ತುಂಬುವ ಕೆಲಸ ಮುಂದುವರೆಸಿದೆ. ಮತ್ತೊಂದೆಡೆ ಮೈಕ್ರೋ-ಸರಣಿ ಅಪ್ಲಿಕೇಶನ್ ಬುಲೆಟ್ ಇಂದಿನ ಪೀಳಿಗೆಗಳಿಗೆ ಕಥೆ ಹೇಳುವ ಕಲೆಗೆ ಹೊಸ ಅರ್ಥ ನೀಡುತ್ತಿದೆ. ಇನ್ನು ನಮಗೆ ವೀಕ್ಷಕರು ನೀಡುವ ಸಪೋರ್ಟ್ ಮತ್ತು ಪ್ರೀತಿ ಅಭೂತಪೂರ್ಣ” ಎಂದಿದ್ದಾರೆ.
ಯಾರು ಯಾವ ಪ್ರಶಸ್ತಿಗೆ ಭಾಜನರಾದರು, ಯಾರು ಯಾವ ಹಾಡಿಗೆ ನೃತ್ಯ ಮಾಡಿದರು, ಯಾರು ಯಾವ ಉಡುಗೆಯಲ್ಲಿ ಮಿಂಚಿದರು ಹೀಗೆ ಮತ್ತಷ್ಟು ಕೂತೂಹಲಕಾರಿ ವಿಷಯಗಳನ್ನು ತಿಳಿದುಕೊಳ್ಳಲು, ನಗು, ತರ್ಲೆ, ಅಳು, ನೋವು, ನಲಿವು ಮತ್ತು ಇನ್ನಷ್ಟು ಭಾವನೆಗಳ ಸಮ್ಮಿಲನವನ್ನು ಕಣ್ತುಂಬಿಕೊಳ್ಳಲು ನೋಡಿ ‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025 ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳಬೇಡಿ.





