ದೈನಂದಿನದ ಚಟುವಟಿಗಳಿಂದ ಬೇಸತ್ತವರಿಗೆ ಮುದ ನೀಡಲು ನಮ್ಮ ಹಿರಿಯರು ಹಬ್ಬದ ಆಚರಣೆಗಳನ್ನು ರೂಢಿಗೆ ತಂದರು. ಕೇವಲ ಮಾನವರು ಮಾತ್ರವಲ್ಲದೇ ಅವನ ಜೊತೆ ಹೆಗಲಿಗೆ ಹೆಗಲು ಕೊಟ್ಟು ದುಡಿಯುವ ಸಾಕು ಪ್ರಾಣಿಗಳಿಗೂ ತುಸು ನೆಮ್ಮದಿ ಮತ್ತು ಸಂತೋಷವನ್ನು ನೀಡಲು ಕೆಲವು ವಿಶೇಷ ಹಬ್ಬಗಳನ್ನು ಆಚರಿಸುತ್ತಾರೆ. ಹಾಗೆ ಪ್ರಕೃತಿ, ಪ್ರಾಣಿ, ಪಶು ಮತ್ತು ಮಾನವವರು ಎಲ್ಲರೂ ಕೂಡಿ ಸಂತಸದಿಂದ ವೈವಿದ್ಯಮಯವಾಗಿ ಸಂಭ್ರಮಿಸುವ ಹಬ್ಬವೇ ಮಕರ ಸಂಕ್ರಾಂತಿ. ಇದನ್ನು ಸುಗ್ಗಿಯ ಹಬ್ಬವೆಂದೂ ಕರೆಯಲಾಗುತ್ತದೆ.

13

ಇಡೀ ಭೂಸಂಕುಲದ ಎಲ್ಲಾ ಚಟುವಟಿಕೆಗಳು ಸೂರ್ಯ ಮತ್ತು ಚಂದ್ರನ ಮೇಲೆಯೇ ಅವಲಂಭಿತವಾಗಿದೆ. ಪ್ರತಿ ಸಂವತ್ಸರ(ವರ್ಷ)ವನ್ನು ಎರಡು ಅಯನಗಳಾಗಿ ವಿಂಗಡಿಸಲಾಗಿದೆ.ಉತ್ತರಾಯಣ ( ಪುಷ್ಯಮಾಸದಿಂದ ಆಷಾಢಮಾಸದವರೆಗೆ) ಮತ್ತು ದಕ್ಷಿಣಾಯನ ( ಆಷಾಡ ಮಾಸದಿಂದ ಪುಷ್ಯಮಾಸದವರೆಗೆ)ಹೀಗೆ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪ್ರವೇಶಿಸುವ ಕಾಲವನ್ನು ಮಕರ ಸಂಕ್ರಮಣ ಎಂದು ಕರೆಯಲಾಗುತ್ತದೆ. ಸೂರ್ಯನು ಪ್ರತೀ ರಾಶಿಯಲ್ಲಿ ಒಂದೊಂದು ತಿಂಗಳ ಕಾಲವಿದ್ದು ಧನಸ್ಸು ರಾಶಿಯಿಂದ ಮಕರ ರಾಶಿಗೆ ಸೇರುವ ಸಮಯವನ್ನು ಮಕರ ಸಂಕ್ರಾಂತಿ ಎನ್ನುತ್ತಾರೆ. ಸಾಧಾರಣವಾಗಿ ಪ್ರತೀ ವರ್ಷ ಜನವರಿ 14 ಅಥವಾ 15ರಂದು ಸೂರ್ಯನು ಮಕರ ರಾಶಿಗೆ ಪ್ರವೇಶ ಮಾಡುವ ಮೂಲಕ ಆತನ ಪಥವು ಉತ್ತರಾಭಿಮುಖವಾಗಿ ಚಲಿಸಲು ಪ್ರಾರಂಭವಾಗುವ ಕಾರಣ, ಈ ಸಮಯದಲ್ಲಿ ಬೆಳಕು ಹೆಚ್ಚು ಇರುತ್ತದೆ.

1

ಪುರಾಣ ಮತ್ತು ಜ್ಯೋತಿಷ್ಯದ ಪ್ರಕಾರ ಉತ್ತರಾಯಣದಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂದು ನಂಬಿಕೆಯಿರುವ ಕಾರಣ, ಈ ಸಮಯದಲ್ಲಿ ಮೃತರಾದವರು ಸೀದಾ ಸ್ವರ್ಗಕ್ಕೆ ಹೋಗುತ್ತಾರೆ ಎಂಬ ನಂಬಿಕೆಯೂ ಇದೆ. ಶ್ರೀಕೃಷ್ಣನೂ ಸಹಾ ಭಗದ್ಗೀತೆಯಲ್ಲಿ ಆಯಣಗಳಲ್ಲಿ ಉತ್ತರಾಯಣವೇ ಅತಿ ಶ್ರೇಷ್ಠ ಎಂದಿದ್ದಾನೆ. ಹಾಗಾಗಿಯೇ ಕುರುಕ್ಷೇತ್ರದ ಯುದ್ಧದಲ್ಲಿ ಭೀಷ್ಮ ಪಿತಾಮಹರು ಯಮ ಯಾತನೆಯನ್ನು ಅನುಭವಿಸುತ್ತಿದ್ದರೂ ದಕ್ಷಿಣಾಯನದಲ್ಲಿ ತನ್ನ ದೇಹವನ್ನು ತ್ಯಜಿಸಲು ಇಚ್ಛಿಸದೇ, ಉತ್ತರಾಯಣದ ಪುಣ್ಯಕಾಲದವರೆಗೂ ಅರ್ಜುನ ನಿರ್ಮಿಸಿದ ಬಾಣಗಳ ಮಂಚದ ಮೇಲೆ ದಿನಗಳನ್ನು ಕಳೆದು ಅಷ್ಟಮಿ ದಿನದಂದು ಇಚ್ಛಾ ಮರಣಿಯಾಗುತ್ತಾರೆ.

ಇನ್ನು ಬ್ರಹ್ಮ ದೇವನು ಈ ಜಗತ್ತಿನ ಸೃಷ್ಟಿಯನ್ನು ಪ್ರಾರಂಭಿಸಿದ್ದು, ಶಿವ ಮತ್ತು ಪಾರ್ವತಿಯರು ವಿವಾಹವಾಗಿದ್ದು, ಇಂದ್ರನಿಗೆ ಗೌತಮರು ಶಾಪ ವಿಮೋಚನೆ ಮಾಡಿದ್ದು, ನಾರಾಯಣನು ವರಾಹ ಅವತಾರದಿಂದ ಭೂಮಿಯ ಮೇಲೆ ಪಾದ ಸ್ಪರ್ಶ ಮಾಡಿದ್ದು, ಸಮುದ್ರ ಮಥನದಲ್ಲಿ ಮಹಾಲಕ್ಷ್ಮಿ ಅವತರಿಸಿದ್ದು ಹಾಗೂ ಋಷಿ ಮುನಿಗಳು ತಪಸ್ಸಿಗೆ ಆಯ್ಕೆ ಮಾಡಿಕೊಂಡಿದ್ದು ಸಹ ಈ ಉತ್ತರಾಯಣ ಕಾಲದಲ್ಲಿಯೇ. ಹಾಗಾಗಿ ಬಹುತೇಕ ವಿವಾಹಗಳು, ನಾಮಕರಣ, ಚೌಲ-ಉಪನಯನ ಮತ್ತು ಗೃಹಪ್ರವೇಶಗಳಂತಹ ಶುಭ ಸಮಾರಂಭಗಳು ಉತ್ತರಾಯಣಕಾಲದಲ್ಲಿ ಹೆಚ್ಚಾಗಿ ಮಾಡಲ್ಪಡುತ್ತದೆ. ಮಾಘ ಮಾಸದಲ್ಲಿ ನದಿಗಳಲ್ಲಿ ಸ್ನಾನ ಮಾಡಿ ಗಂಗೆ ಪೂಜೆ ಮಾಡಿದರೂ ಪುಣ್ಯ ಲಭಿಸುತ್ತದೆ ಎಂಬ ನಂಬಿಕೆಯೂ ಇದೆ.

ಇನ್ನು ಹಳ್ಳಿಗಾಡಿನಲ್ಲಿ ಬೇರೆಲ್ಲಾ ಹಬ್ಬಗಳಿಗಿಂತ ಈ ಸಂಕ್ರಾಂತಿ ಹಬ್ಬವನ್ನು ಬಹಳ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಗುತ್ತದೆ. ಆಗ ತಾನೆ ಬೆಳೆದ ಫಸಲುಗಳೆಲ್ಲವನ್ನೂ ಕಟಾವು ಮಾಡಿ ಕಣಜಗಳಲ್ಲಿ ರಾಶಿ ರಾಶಿಯಾಗಿ ತಂಬಿರುವ ಪರಿಣಾಮವಾಗಿ ಇದನ್ನು ಸುಗ್ಗಿ ಹಬ್ಬ ಎಂದೂ ಕರೆಯುತ್ತಾರೆ. ಸುಗ್ಗಿಯು ಬಂದಿತು, ಹಿಗ್ಗನು ತಂದಿತು, ನಮ್ಮಯ ನಾಡಿನ ಜನಕೆಲ್ಲ ಎಂಬ ಜನಪದ ಹಾಡು ಬಹಳ ಪ್ರಸಿದ್ಧವಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ