ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಈಶಾ ಫೌಂಡೇಶನ್​ನ 77 ಯಾತ್ರಿಕರು ನಾಪತ್ತೆಯಾಗಿದ್ದಾರೆ ಎಂದು ಸದ್ಗುರು ಜಗ್ಗಿ ವಾಸುದೇವ್​ ತಿಳಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಅವರು, ನಮ್ಮವರು ಇದ್ದ “ಕೈಲಾಶ” ಗುಂಪು ಕೂಡಾ ಪ್ರವಾಹದಲ್ಲಿ ಸಿಲುಕಿಕೊಂಡಿದೆ. ಈ ಗುಂಪಿನಲ್ಲಿದ್ದವರ ಪೈಕಿ 77 ಸದಸ್ಯರು ನಾಪತ್ತೆಯಾಗಿದ್ದಾರೆ. ಅವರು ವಲಸೆ ಕಚೇರಿಯಿಂದ ಮರಳುವಾಗ ಈ ಅವಘಡ ಸಂಭವಿಸಿದೆ. 495 ಮಂದಿ ಸುರಕ್ಷಿತವಾಗಿ ಮರಳಿದ್ದಾರೆ ಎಂದು ಹೇಳಿದ್ದಾರೆ.

ನಾಪತ್ತೆಯಾಗಿರುವವರ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಸಂಕಷ್ಟಕ್ಕೆ ಸಿಲುಕಿರುವವರ ರಕ್ಷಣೆಯಲ್ಲಿ ಎಲ್ಲ ಸ್ವಯಂ ಸೇವಕರು ತೊಡಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಎಷ್ಟೇ ಅಪಾಯವಿದ್ದರೂ ಸರಿ, ಪ್ರವಾಹ ಪೀಡಿತ ಸ್ಥಳಕ್ಕೆ ಹೋಗಿ ರಕ್ಷಣಾ ಕೆಲಸದಲ್ಲಿ ಭಾಗಿಯಾಗಲು ನಾವು ಸಿದ್ಧರಿದ್ದೇವೆ. ನಮ್ಮ ಒಟ್ಟು 21 ತಂಡಗಳಲ್ಲಿ, 495 ಮಂದಿ ಈಗಾಗಲೇ ಸುರಕ್ಷಿತವಾಗಿ ಹಿಂದಿರುಗಿದ್ದಾರೆ. ಪ್ರಸ್ತುತ 743 ಮಂದಿ ಟಿಬೆಟ್​ನಲ್ಲಿದ್ದರೆ, 148 ಮಂದಿ ನೇಪಾಳದಲ್ಲಿದ್ದಾರೆ. ಹಾಗೆಯೇ ನೇಪಾಳದ ತಿಮುರೆಯಲ್ಲಿ ಮೂವರ ಸ್ವಯಂ ಸೇವಕರಿದ್ದಾರೆ.” ಎಂದು ಸದ್ಗುರು ಮಾಹಿತಿ ನೀಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ