ಲಾರಿಯೊಂದು ಪ್ರಯಾಣಿಕನಿಗಾಗಿ ಕಾಯುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಕುರುಬರಹಳ್ಳಿ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದೆ.

ಕಲಬುರಗಿ ಮೂಲದ ಅಂಬದಾಸ್ (23) ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾನೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಮಾರ್ಗದರ್ಶನದಂತೆ ಕುರುಬರಹಳ್ಳಿ ಮಾರ್ಗವಾಗಿ ಸಾಗುತ್ತಿತ್ತು. ಆದರೆ, ಈ ಮಾರ್ಗದಲ್ಲಿ ಇಳಿಜಾರು ರಸ್ತೆ ಇರುವುದರಿಂದ, ಈಗಾಗಲೇ ಓವರ್‌ಲೋಡ್ ಆಗಿದ್ದ ಲಾರಿ ನಿಯಂತ್ರಣ ತಪ್ಪಿದೆ.

ಈ ಸಂದರ್ಭ ಪ್ರಯಾಣಿಕನಿಗಾಗಿ ಕಾಯುತ್ತಿದ್ದ ಕಾರೊಂದಕ್ಕೆ ಲಾರಿ ಭೀಕರವಾಗಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ಕಾರನ್ನು ಸುಮಾರು 50ರಿಂದ 100 ಮೀಟರ್ ದೂರವರೆಗೆ ಎಳೆದೊಯ್ದಿದೆ.

ನಂತರ ಕಾರು ಸಮೀಪದಲ್ಲಿದ್ದ ಸ್ಕ್ರಾಪ್ ಗೋದಾಮಿಗೆ ನುಗ್ಗಿದ್ದು, ಡಿಕ್ಕಿಯಿಂದ ಉಂಟಾದ ಸ್ಪಾರ್ಕ್‌ನಿಂದ ಕಾರು ಹಾಗೂ ಸ್ಕ್ರಾಪ್ ಸಾಮಗ್ರಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಕಾರು ಮತ್ತು ಲಾರಿ ಎರಡೂ ಹೊತ್ತಿ ಉರಿದಿವೆ.

ಘಟನೆಯ ಸಮಯದಲ್ಲಿ ಕಾರಿನೊಳಗಿದ್ದ ಚಾಲಕ ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಲು ಹರಸಾಹಸ ಪಟ್ಟಿದ್ದಾರೆ. ಐದಾರು ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು.

ಲಾರಿ ಚಾಲಕ ಅಪಘಾತ ಸಂಭವಿಸುತ್ತಿದ್ದಂತೆಯೇ ಲಾರಿಯಿಂದ ಜಿಗಿದು ಸಮೀಪದ ರಾಜಾಕಾಲುವೆಗೆ ಹಾರಿ ಜೀವ ಉಳಿಸಿಕೊಂಡಿದ್ದಾನೆ. ಆತನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಾಜಿನಗರ ಸಂಚಾರಿ ಪೊಲೀಸರು ಚಾಲಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ