ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನು.ಎಲ್‌.ಎನ್. (29) ಮೃತ ವರ. ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿ.

ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ವಿವಾಹ ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿತ್ತು.

ಎರಡೂ ಕುಟುಂಬಗಳಲ್ಲಿಯೂ ಮದುವೆ ಸಂಭ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಮನು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಮೂಗಲಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಹೊರಟಿದ್ದರು.

ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ