ಚಿತ್ರದುರ್ಗ ಬಸ್ ದುರಂತದಲ್ಲಿ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಬಸ್ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿಎಂ, ಬಳಿಕ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಬಸ್ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿಎಂ, ಬಳಿಕ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ 5 ಲಕ್ಷ ಸರ್ಕಾರದಿಂದ ಪರಿಹಾರ ನೀಡಲಾಗುವುದು. ಅದೇ ರೀತಿ, ಗಾಯಾಳುಗಳಿಗೆ ತಲಾ 50 ಸಾವಿರ ಘೋಷಣೆ ಮಾಡಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಬಸ್ ದುರಂತಕ್ಕೆ ಒಳಗಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಎದುರಿಗೆ ಬರುತ್ತಿದ್ದ ಲಾರಿ ಡಿವೈಡರ್ಗೆ ಡಿಕ್ಕಿ ಹೊಡೆದು, ಬಸ್ಗೆ ಬಂದು ಗುದ್ದಿದೆ. ಲಾರಿ, ನೇರವಾಗಿ ಬಸ್ನ ಡೀಸೆಲ್ ಟ್ಯಾಂಕ್ಗೆ ಗುದ್ದಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





