ನಟ, ನಿರ್ಮಾಪಕ ದಿಲೀಪ್ ರಾಜ್ ಇಂದು ನಸುಕಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

47 ವಯಸ್ಸಿನ ದಿಲೀಪ್ ರಾಜ್ ಅವರಿಗೆ (ಮೇ 13) ಬೆಳಗಿನ ಜಾವ ಮನೆಯಲ್ಲಿದ್ದಾಗಲೇ ತೀವ್ರ ಹಾರ್ಟ್ ಅಟ್ಯಾಕ್ ಆಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಸುಮಾರು 24 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದರು. ಇತ್ತೀಚೆಗೆ ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಅವರು, ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ನಿರ್ಮಿಸಿದ್ದರು.ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದಿದ್ದ ಅವರು ಕೆಲವು ಸಿನಿಮಾಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾ ಮತ್ತು ಟಿವಿ ಎರಡರಲ್ಲೂ ತೊಡಗಿಕೊಂಡಿದ್ದರು. 2005ರಲ್ಲಿ ತೆರೆ ಕಂಡಿದ್ದ 'ಬಾಯ್‌ ಫ್ರೆಂಡ್' ಸಿನಿಮಾದಲ್ಲಿ ನಾಯಕ ನಟರಾಗಿ ಬಣ್ಣಲೋಕ ಪ್ರವೇಶಿಸಿದ್ದರು.

2007ರಲ್ಲಿ ತೆರೆಗೆ ಬಂದು ಭರ್ಜರಿ ಪ್ರದರ್ಶನ ನೀಡಿದ 'ಮಿಲನ' ಸಿನಿಮಾದಲ್ಲಿ ನೆಗಟಿವ್ ರೋಲ್ ಮಾಡಿದ್ದರು. ಇದರೊಂದಿಗೆ ಕನ್ನಡದ 'ಕ್ಷಣ ಕ್ಷಣ, 7 ಓಕ್ಲಾಕ್, ಲವ್ ಗುರು' ಮತ್ತು ಇತ್ತೀಚೆಗೆ ತೆರೆ ಕಂಡ 'ಲವ್ ಮಾಕ್ಟೇಲ್ 3' ಸೇರಿ ಕೆಲವು ಸಿನಿಮಾಗಳಲ್ಲೂ ದಿಲೀಪ್ ರಾಜ್ ನಟಿಸಿದ್ದಾರೆ. ರಿಯಾಲಿಟಿ ಶೋಗಳಲ್ಲಿ ನಿರೂಪಕರಾಗಿಯೂ ಅವರು ಕಾಣಿಸಿಕೊಂಡಿದ್ದರು.

'ರಥಸಪ್ತಮಿ' ಧಾರಾವಾಹಿಯೊಂದಿಗೆ ಕಿರುತೆರೆಗೆ ಮರಳಿದ್ದ ದಿಲೀಪ್ ರಾಜ್, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ನಟಿಸಿ, ನಿರ್ಮಿಸಿದ್ದರು. ಅದರಲ್ಲಿ ಅವರ ಪಾತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. "ಕೃಷ್ಣ ರುಕ್ಕು" ಧಾರಾವಾಹಿ ನಿರ್ಮಾಪಕರೂ ಆಗಿದ್ದ ದಿಲೀಪ್ ರಾಜ್ ಸಾವು ಚಿತ್ರರಂಗಕ್ಕೆ, ಅವರ ಆಪ್ತರು, ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದೊಡ್ಡ ಆಘಾತವಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ