ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಏರ್ ಇಂಡಿಯಾ ವಿಮಾನದ ಹಿಂಭಾಗ ಲ್ಯಾಂಡಿಂಗ್ ವೇಳೆ ಏಕಾಏಕಿ ನೆಲಕ್ಕಪ್ಪಳಿಸಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

181 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾದ AI2651 ವಿಮಾನವು ಬೆಳಗ್ಗೆ ಲ್ಯಾಂಡಿಂಗ್ ಮಾಡುತ್ತಿದ್ದ ವೇಳೆ ವಿಮಾನದ ಬಾಲ ರನ್‌ವೇಗೆ ಅಪ್ಪಳಿಸಿದೆ. ಬಳಿಕ ವಿಮಾನಯಾನ ಸಂಸ್ಥೆಯು, ವಿವರವಾದ ಪರಿಶೀಲನೆಗಾಗಿ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದೆ.

ಲ್ಯಾಂಡಿಂಗ್ ಸಮಯದಲ್ಲಿ ವಿಮಾನದ ಬಾಲ ನೆಲಕ್ಕೆ ಡಿಕ್ಕಿ ಹೊಡೆದಿದೆ. ಆದರೂ ವಿಮಾನ ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ವಿಮಾನವು ರನ್‌ವೇ ಸಮೀಪಿಸುತ್ತಿದ್ದಾಗ "ವೇಕ್ ಟರ್ಬ್ಯುಲೆನ್ಸ್" ಅನ್ನು ಎದುರಿಸಿತು. ನಂತರ ಪೈಲಟ್ ಅತ್ಯಂತ ಕುಶಲತೆಯಿಂದ ಲ್ಯಾಂಡಿಂಗ್ ಮಾಡಿದರು. ಈ ವೇಳೆ ಬಾಲ ನೆಲಕ್ಕೆ ಡಿಕ್ಕಿ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ