ಅರೇ ಇದೆಂತಹಾ ಶೀರ್ಷಿಕೆ? ಬದಾಮಿಯಲ್ಲಿರುವುದು ಬನಶಂಕರಿ ದೇವಿ. ಅನ್ನಪೂರ್ಣೇ ಇರುವುದು ಹೊರನಾಡಿನಲ್ಲಿ ಎಂದು ಯೋಚಿಸುತ್ತಿದ್ದರೆ, ನಿಮ್ಮ ಉಹೆ ತಪ್ಪೆಂದು ಹೇಳುತ್ತಿಲ್ಲ. ಹಸಿದವರಿಗೆ ಹೊಟ್ಟೇ ತುಂಬ ಅಮ್ಮನ ಮಮತೆಯಿಂದ ಊಟ ಬಡಿಸುವ ಅನ್ನಪೂರ್ಣೆಯರು ಎಲ್ಲಾ ಮನೆಗಳಲ್ಲಿಯೂ ಒಬ್ಬೊಬ್ಬರು ಇದ್ದರೆ, ಶಾಕಾಂಬರಿ ಬದಾಮಿಯ ತಾಯಿ ಬನಶಂಕರಿಯ ಸನ್ನಿಧಿಯಲ್ಲಿ ಇಂತಹ ನೂರಾರು ಅನ್ನಪೂರ್ಣೆಯರನ್ನು ಕಾಣಬಹುದಾದಂತಹ ಸುಂದರ ರೋಚಕವಾದ ಅನುಭವ ಇದೋ ನಿಮಗಾಗಿ.

ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ ತಾಯಿ ಬನಶಂಕರಿಯಾಗಿ ನೆಲೆಸಿರುವ ಶ್ರೀ ಕ್ಷೇತ್ರವೇ ಬದಾಮಿ. ಈ ಮಹಾತಾಯಿಯನ್ನು ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಹೀಗೆ ಹತ್ತಾರು ಹೆಸರುಗಳಿಂದ ಭಕ್ತರು ಪೂಜಿಸುತ್ತಾರೆ. ನವದುರ್ಗೆಯರಲ್ಲಿ 6ನೇ ಅವತಾರವೇ ಬನಶಂಕರಿ ಎಂದೂ ಹೇಳಲಾಗುತ್ತದೆ.

ಈ ಪ್ರದೇಶದಲ್ಲಿ ಸರಸ್ವತಿ ಹೊಳೆ ಹರಿಯುವ ಕಾರಣ ಸುಂದರವಾದ ಮತ್ತು ದಟ್ಟವಾದ ಅರಣ್ಯ ಪ್ರದೇಶಗಳಿಂದ ಆವರಸಿದ್ದು, ಎಲ್ಲೆಲ್ಲೂ ತೆಂಗು, ಬಾಳೆ ಮತ್ತು ವಿಳ್ಳೇದೆಲೆ ಹಂಬುಗಳ ತೋಟಗಳ ಮಧ್ಯೆ ಇರುವ ಈ ವನಶಂಕರಿ, ಕಾಡುಗಳ ದೇವತೆ, ಅರ್ಥಾತ್ ಬನಶಂಕರಿ ದೇವಿ ಈ ಪ್ರದೇಶದಲ್ಲಿ ನೆಲೆಗೊಳ್ಳುವುದರದ ಹಿಂದೆ ಒಂದು ಪೌರಾಣಿಕ ಕಥೆಯಿದೆ.

ಪುರಾಣ ಕಾಲದಲ್ಲಿ ಈ ಪ್ರದೇಶವು ಭಯಂಕರ ಕ್ಷಾಮದಿಂದ ತತ್ತರಿಸಿ, ಪಶು ಪಕ್ಷಿ ಪ್ರಜೆಗಳಾದಿಗಳೆಲ್ಲರೂ ನೀರಿಲ್ಲದೇ ಪರಿತಪಿಸುತ್ತಿದ್ದಾಗ, ದೇವಾನುದೇವತೆಗಳೆಲ್ಲರೂ ಸೇರಿ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರನ್ನು ಕಂಡು ಈ ಸಮಸ್ಯೆಯಿಂದ ಪಾರು ಮಾಡಲು ಎಂದು ಪ್ರಾರ್ಥಿಸಿದರಂತೆ. ಅದಕ್ಕೆ ಆ ತ್ರಿಮೂರ್ತಿಗಳು ಈ ಸಮಸ್ಯೆಗೆ ಬನಶಂಕರಿದೇವಿ ಮಾತ್ರಾ ಪರಿಹಾರವನ್ನು ನೀಡಬಲ್ಲಳು ಎಂದು ಹೇಳಿ ಎಲ್ಲರೂ ಸೇರಿ ತಿಲಕಾರಣ್ಯ ಪ್ರದೇಶಕ್ಕೆ ಬಂದು ತಾಯಿ ಬನಶಂಕರಿಯನ್ನು ಕುರಿತು ತಾಯಿ, ಈ ಪ್ರದೇಶದಲ್ಲಿ ಮಳೆ ಬೆಳೆಯಿಲ್ಲದೇ, ಯಜ್ಞಯಾಗಾದಿಗಳು ಇಲ್ಲದೇ, ಬದುಕಲು ಬಹಳ ಕಷ್ಟವಾಗಿದೆ. ದಯವಿಟ್ಟು ಈ ಸಮಸ್ಯೆಯಿಂದ ಪಾರು ಮಾಡು ಎಂದು ಪರಿ ಪರಿಯಾಗಿ ಪ್ರಾರ್ಥಿಸುತ್ತಾರೆ. ಅವರೆಲ್ಲರ ಪ್ರಾರ್ಥನೆಯಿಂದ ಪ್ರಸನ್ನಳಾದ ಬನಶಂಕರಿ ದೇವಿ ಪ್ರತ್ಯಕ್ಷಳಾಗಿ ಜನರ ನೀರಿನ ದಾಹವನ್ನು ತೀರಿಸಿದ್ದಲ್ಲದೇ, ತನ್ನ ತನುವಿನ ಶಾಖದಿಂದ ಕಾಯಿಪಲ್ಲೆಗಳನ್ನು ಸೃಷ್ಟಿಸಿ ಜನರ ಸಂಕಷ್ಟಗಳನ್ನು ನೀಗಿಸಿದಳಂತೆ. ಹಾಗಾಗಿ ಈ ದೇವಿಗೆ ಶಾಕಾಂಬರಿ ಎಂದೂ ಕರೆಯಲಾಗುತ್ತದೆ.

ಮುಂದೆಂದೂ ಈ ಪ್ರದೇಶ ನೀರಿಲ್ಲದೇ ಕ್ಷಾಮಕ್ಕೆ ಈಡಾಗಬಾರದೆಂದು ಈ ಪ್ರದೇಶದಲ್ಲಿ ಹರಿದ್ರಾತೀರ್ಥ, ತೈಲತೀರ್ಥ, ಪದ್ಮತೀರ್ಥ, ಕ್ಷಮಾತೀರ್ಥ ಮುಂತಾದ ಅನೇಕ ತೀರ್ಥಕೊಳಗಳನ್ನು ಸೃಷ್ಟಿ ಮಾಡಿದ ಕಾರಣ ಈ ಪ್ರದೇಶ ಸದಾ ನಂದನವನವಾಗಿ ನಿತ್ಯಹದ್ವರ್ಣಗಳಿಂದ ಕಂಗೊಳಿಸುವಂತಾಗಿದೆ.

ಚಾಲುಕ್ಯರ ವಾಸ್ತುಶಿಲ್ಪ ಶೈಲಿಯಲ್ಲಿದ್ದ ಈ ದೇವಸ್ಥಾನವನ್ನು ಮುಂದೆ 18ನೇ ಶತಮಾನದಲ್ಲಿ ಮರಾಠರ ದಳವಾಯಿಗಳು ಜೀರ್ಣೋದ್ಧಾರ ಮಾಡಿರುವ ಈ ದೇವಾಲಯದಲ್ಲಿ ಗರ್ಜಿಸುತ್ತಿರುವ ಸಿಂಹದ ಮೇಲೆ ವಿರಾಜಮಾನಳಾಗಿರುವ ಬನಶಂಕರಿಯ ವಿಗ್ರಹವಿದ್ದು ಪ್ರತೀ ದಿನವೂ ನೂರಾರು ಭಕ್ತಾದಿಗಳು ಆಕೆಯ ದರ್ಶನ ಪಡೆದು ಪುನೀತರಾಗುತ್ತಾರೆ. ಪ್ರತೀ ವರ್ಷ ಪುಷ್ಯ ಮಾಸದಲ್ಲಿ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ಇಲ್ಲಿ ನಡೆಯುವ ಬನಶಂಕರಿ ಜಾತ್ರೆ ಜಗದ್ವಿಖ್ಯಾತವಾಗಿದ್ದು, ಕೇವಲ ಕರ್ನಾಟಕ ಮಾತ್ರವಲ್ಲ್ದೇ ನೆರೆಯ ಮಹಾರಾಷ್ಟ್ರ ಮತ್ತು ದೇಶಾದ್ಯಂತ ಹರಿದು ಹಂಚಿಹೋಗಿರುವ ಆಕೆಯ ಭಕ್ತರು ಈ ಜಾತ್ರೆಗೆ ಬಂದು ತಾಯಿಯ ದರ್ಶನ ಪಡೆದು ಪ್ರಸನ್ನರಾಗುತ್ತಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ