ನಾವೆಲ್ಲರೂ, ಗೋದಾನ, ಭೂದಾನ, ಸುವರ್ಣದಾನ, ರತ್ನದಾನ ಕಡೆಗೆ ಅನ್ನದಾನ ಮತ್ತು ರಕ್ತದಾನವನ್ನು ಕೇಳಿದ್ದೇವೆ. ಅರೇ, ಇದೇನಿದು ಅಪೂಪ ದಾನ? ಅಂತ ಆಶ್ಚರ್ಯ ಪಡ್ತಾ ಇದ್ದೀರಾ? ಹೌದು ಈ ರೀತಿಯಾದ ಅಪರೂಪದ ಅಪೂಪ ದಾನವನ್ನು ಎಲ್ಲಾ ಸಮಯದಲ್ಲಿಯೂ ಕೊಡಲು ಬರುವುದಿಲ್ಲ. ಇದು ಕೇವಲ ಮೂರು ವರ್ಷಗಳಿಗೊಮ್ಮೆ ಬರುವ ಅಧಿಕಮಾಸದಲ್ಲಿ ಮಾತ್ರವೇ ಕೊಡುವಂತಹ ಅನುರೂಪದ ಮತ್ತು ಅಪರೂಪದ ದಾನವೇ ಅಪೂಪ ದಾನ. ಹಾಗಾದ್ರೇ ಅಪೂಪ ದಾನ ಅಂದ್ರೆ ಏನು? ಅಧಿಕ ಮಾಸ ಅಂದ್ರೇ ಏನು? ಅದು ಹೇಗೆ ಬರುತ್ತದೆ? ಮತ್ತು ಅದರ ಮಹತ್ವ ಮತ್ತು ಆ ಮಾಸಾಚರಣೆಯ ಬಗ್ಗೆ ಸ್ವಲ್ಪ ಮಾಹಿತಿಯನ್ನು ತಿಳಿದುಕೊಳ್ಳೋಣ.

ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುವುದನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಯಾವ ಚಾಂದ್ರಮಾಸದಲ್ಲಿ ಸೂರ್ಯ ಸಂಕ್ರಾಂತಿ ಇರುವುದಿಲ್ಲವೋ ಆ ಮಾಸವನ್ನು ಅಧಿಕ ಮಾಸವೆಂದು ಪರಿಗಣಿಸಲಾಗುತ್ತದೆ. ಪ್ರತೀ 33ನೇ ಚಾಂದ್ರಮಾಸವು ಅಧಿಕ ಮಾಸವಾಗಿರುತ್ತದೆ. ವಶಿಷ್ಟ ಸಿದ್ದಾಂತ ಪ್ರಕಾರ ಅಧಿಕ ಮಾಸವು 32 ತಿಂಗಳು 16 ದಿವಸಗಳು, 3 ಗಂಟೆ 12 ನಿಮಿಷಕ್ಕೆ ಬರುತ್ತದೆ.

ಅಧಿಕಮಾಸವು ಸಹ ಖಗೋಳ ಶಾಸ್ತ್ರ ಮತ್ತು ಗಣಿತ ಸೂತ್ರಗಳನ್ನು ಆಧರಿಸಿದೆ. ಭೂಮಿಯು ಸೂರ್ಯನ ಸುತ್ತ, ಒಂದು ಸುತ್ತು ಸುತ್ತಿ ಬರಲು (1 ಆವರ್ತ) ಅಂದರೆ 365.2422 ದಿವಸಗಳು ಬೇಕು. ಇದು ಸೌರಮಾನದ ವಾರ್ಷಿಕ ಚಲನೆಯಾದರೆ, ಚಂದ್ರನು ಭೂಮಿಯ ಸುತ್ತಲೂ ಒಂದು ಸುತ್ತು ಸುತ್ತಿ ಬರಲು 27.3 ದಿವಸಗಳು ಬೇಕು. ಹಾಗಾಗಿ ಇದು ಚಂದ್ರಮಾನದ ಮಾಸಿಕ ಚಲನೆಯಾಗಿದೆ. ಹೀಗೆ ಭೂಮಿ ಮತ್ತು ಚಂದ್ರರ 27.3 ದಿವಸಗಳ ಚಲನೆ ಲೆಖ್ಖಾಚಾರದ ಪ್ರಕಾರ ಸೂರ್ಯನ ಸುತ್ತಲೂ 1/12 ಭಾಗವನ್ನು ಚಲಿಸಿರುತ್ತದೆ. ಸೂರ್ಯನ ಸುತ್ತಲು ಚಲಿಸುವ ಭೂಮಿಯ ಪಥವು ಸಮನಾಗಿಲ್ಲವಾಗಿರುವುದರಿಂದ, ಚಂದ್ರನು ಒಂದು ಹುಣ್ಣಿಮೆಯಿಂದ ಮತ್ತೊಂದು ಹುಣ್ಣಿಮೆವರೆಗೆ ಚಲಿಸಲು 2.2 ಹೆಚ್ಚಿನ ದಿವಸಗಳನ್ನು ತೆಗೆದುಕೊಳ್ಳುತ್ತದೆ. ಅದೇ ರೀತಿ ಭೂಮಿಯೂ ಸಹಾ ಸೂರ್ಯನ ಸುತ್ತಲೂ ಚಲಿಸುತ್ತಿರುವುದರಿಂದ ಚಂದ್ರನು ಒಂದು ಹುಣ್ಣಿಮೆಯಿಂದ ಮತ್ತೊಂದು ಹುಣ್ಣಿಮೆಯವರೆಗೆ ಚಲಿಸಲು 29.531 ದಿವಸಗಳನ್ನು ತೆಗೆದುಕೊಳ್ಳುತ್ತದೆ.

ಹಾಗಾಗಿ ಚಾಂದ್ರಮಾನದ ಲೆಖ್ಖಾಚಾರದಂತೆ
ವಾರ್ಷಿಕ ಚಲನೆ 29.531 x 12 = 354.372 ದಿನಗಳಾಗುತ್ತದೆ.
ಸೌರಮಾನದ ವಾರ್ಷಿಕ ಚಲನೆ (1 ಆವರ್ತನ) = 365.2422 ದಿವಸಗಳಾಗುತ್ತದೆ.
ಚಾಂದ್ರಮಾನದ ವಾರ್ಷಿಕ ಚಲನೆ (29.531 x 12) = 354.372
ಸೌರಮಾನ ಮತ್ತು ಚಾಂದ್ರಮಾನದ ವಾರ್ಷಿಕ ವ್ಯತ್ಯಾಸ: (365.2422 – 354.372) = 10.8702 ದಿವಸಗಳಾಗುತ್ತದೆ.

ಈ ರೀತಿಯಾದ 10 ದಿನಗಳ ವ್ಯತ್ಯಾಸ 3 ವರ್ಷಗಳಲ್ಲಿ 32.6106 ದಿವಸಗಳಾಗುತ್ತದೆ. ಹಾಗಾಗಿ ಈ ವ್ಯತ್ಯಾಸ ಸರಿ ತೂಗಿಸಲು ಪ್ರತೀ 3 ವರ್ಷಗಳಿಗೊಮ್ಮೆ ಅಧಿಕ ಮಾಸ ಬರುತ್ತದೆ. ಆಂದರೆ ಪ್ರತೀ 33ನೇ ಚಾಂದ್ರಮಾಸವು ಅಧಿಕ ಮಾಸವಾಗಿರುತ್ತದೆ. ಹೀಗೆ 33 ತಿಂಗಳಿಗೊಮ್ಮೆ ಒಂದು ಮಾಸವನ್ನು ಸೇರಿಸುವ ಪರಿಕಲ್ಪನೆಯೇ ಅಧಿಕ ಮಾಸ. ಈ ಹಿನ್ನೆಲೆಯಲ್ಲಿಯೇ ಅಧಿಕ ಮಾಸದಲ್ಲಿ 33 ಸಂಖ್ಯೆಯ ದಾನಗಳನ್ನು ಕೊಡುವ ಪದ್ಧತಿ ರೂಢಿಯಲ್ಲಿ ಬಂದಿದೆ ಎನ್ನಬಹುದು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ