ಏಷ್ಯಾಕಪ್ ಫೈನಲ್ ಪಂದ್ಯ ರೋಚಕವಾಗಿ ಮುಕ್ತಾಯಗೊಂಡ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಸಿ ಭಾರೀ ಹೈಡ್ರಾಮಾ ನಡೆಯಿತು.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ, ಪಾಕ್‌ನ ಆಂತರಿಕ ವ್ಯವಹಾರಗಳ ಸಚಿವರೂ ಆಗಿರುವ ಏಷ್ಯಾ ಕ್ರಿಕೆಟ್ ಮಂಡಳಿ (ಎಸಿಸಿ) ಅಧ್ಯಕ್ಷ ಮೊಹಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ಭಾರತ ನಿರಾಕರಿಸಿದೆ.

ಮೊಹ್ಸಿನ್ ನಖ್ವಿ ಹಾಗೂ ಇನ್ನಿತರ ಗಣ್ಯರು ವೇದಿಕೆ ಮೇಲೆ ಬಂದು ಕಾಯುತ್ತಾ ನಿಂತಿದ್ದರು. ಆದರೆ. ಭಾರತೀಯ ಆಟಗಾರರು ವೇದಿಕೆಯಿಂದ 15-20 ಅಡಿ ದೂರದಲ್ಲಿ ನಿಂತು ಪ್ರತಿರೋಧ ವ್ಯಕ್ತಪಡಿಸಿದರೆ, ಪಾಕಿಸ್ತಾನಿ ಆಟಗಾರರು ಡ್ರೆಸ್ಸಿಂಗ್ ರೂಮ್ ಬಿಟ್ಟು ಹೊರಗೆ ಬರಲಿಲ್ಲ.

ಪಂದ್ಯ ಮುಗಿದ 55 ನಿಮಿಷಗಳ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭ ಆರಂಭಗೊಂಡಿತು. ಭಾರತ ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ಇನ್ನಿತರ ಗಣ್ಯರಿಂದ ಸ್ವೀಕರಿಸಿತು. ಆದರೆ, ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲಿಲ್ಲ.ಭಾರತ ತಂಡ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಎಸಿಸಿ ಮಾಹಿತಿ ನೀಡಿದೆ ಎಂದು ತಿಳಿಸಿ ನಿರೂಪಕ ಸೈಮನ್ ಡೂಲ್ ಪ್ರಶಸ್ತಿ ವಿತರಣಾ ಸಮಾರಂಭವನ್ನು ಕೊನೆಗೊಳಿಸಿದರು.

ಈ ನಡುವೆ ರನ್ನರ್-ಅಪ್ ಬಹುಮಾನ ಪಡೆಯಲು ಪಾಕ್ ಆಟಗಾರರನ್ನು ವೇದಿಕೆ ಮೇಲೆ ಕರೆಯಲಾಯಿತು. ಒಲ್ಲದ ಮನಸಿನಿಂದಲೇ ಪಾಕ್ ಆಟಗಾರರು ವೇದಿಕೆಗೆ ಬಂದು ಬಾಂಗ್ಲಾ ಕ್ರಿಕೆಟ್ ಮುಖ್ಯಸ್ಥರಿಂದ ಬಹುಮಾನ ಸ್ವೀಕರಿಸಿದರು. ನಾಯಕ ಸಲ್ಮಾನ್ ಚೆಕ್ ಸ್ವೀಕರಿಸಿ ಅದನ್ನು ವೇದಿಕೆ ಮೇಲೆಯೇ ಎಸೆದು ಹೊರನಡೆದರು.

ಈ ನಡುವೆ ಪಾಕ್ ಆಟಗಾರರು ಬಹುಮಾನ ಸ್ವೀಕರಿಸಲು ವೇದಿಕೆಗೆ ಕಾಲಿಡುತ್ತಿದ್ದಂತೆ ಸ್ಟ್ಯಾಂಡ್‌ನಲ್ಲಿದ್ದ ಭಾರತೀಯ ಅಭಿಮಾನಿಗಳು “ಭಾರತ್ ಮಾತಾ ಕೀ ಜೈ,” 'ಮೋದಿ.. ಮೋದಿ' ಎಂದು ಕೂಗಿ, ಪಾಕ್ ಆಟಗಾರರನ್ನ ಕಿಚಾಯಿಸಿದರು.

ಟ್ರೋಫಿ ಇಲ್ಲದೆ ಸಂಭ್ರಮಿಸಿದ ಭಾರತ: ಸ್ಥಳದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ, ಸಂಘಟಕರು ಇದ್ದಕ್ಕಿದ್ದಂತೆ ಟ್ರೋಫಿಯನ್ನು ವೇದಿಕೆಯಿಂದ ಡ್ರೆಸ್ಸಿಂಗ್ ರೂಮ್‌ಗೆ ತೆಗೆದುಕೊಂಡು ಹೋದರು. ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಚಾಂಪಿಯನ್ ತಂಡಕ್ಕೆ ಟ್ರೋಫಿ ನೀಡದೆ ಇರುವ ಘಟನೆ ನಡೆಯಿತು. ಟ್ರೋಫಿ ಇಲ್ಲದೆ ಟೀಂ ಇಂಡಿಯಾ ಆಟಗಾರರು ಸಂಭ್ರಮಿಸಿದರು.

ಭಾರತದ ವಿರುದ್ಧ ವಿಷ ಕಾರುತ್ತಿದ್ದ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸದಿರಲು ಭಾರತ ತಂಡ ದೃಢ ನಿರ್ಧಾರ ತೆಗೆದುಕೊಂಡಿತ್ತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ