ನ್ಯಾಯಾಧೀಶ: ನಿನ್ನ ಹೆಸರೇನು?

ಹುಡುಗ: ಆಜಾದ್!
ನ್ಯಾಯಾಧೀಶ: ತಂದೆಯ ಹೆಸರು?
ಹುಡುಗ: ಸ್ವಾತಂತ್ರ
ನ್ಯಾಯಾಧೀಶ: ಮನೆ ಎಲ್ಲಿದೆ?
ಹುಡುಗ: ಸೆರೆಮನೆಯೇ ನನಗೆ ಮನೆ!

ಇದು ನಾಟಕವೊಂದರ ಸಂಭಾಷಣೆಯಲ್ಲ. ಭಾರತ ಮಾತೆಗೆ ಜೈಕಾರ ಕೂಗಿ, ಬಿಳಿಯರ ವಿರುದ್ಧ ಎದ್ದುನಿಂತ ಹದಿನೈದರ ಪೋರನೊಬ್ಬನ ದಿಟ್ಟ ಉತ್ತರ. ಹೌದು. ಚಂದ್ರಶೇಖರ್ ಆಜಾದ್ ಸ್ವಾತಂತ್ರ್ಯ ಹೋರಾಟಕ್ಕಿಳಿದಾಗ ಆತನಿಗಿನ್ನೂ ಹದಿನೈದೂ ದಾಟಿರಲಿಲ್ಲ. ಬ್ರಿಟೀಷರ ಭಿಕ್ಷೆಗೆ ಕೈಚಾಚದೇ ವಂದೇ ಮಾತರಂ ಎನ್ನುತ್ತಾ ಹನ್ನೆರಡು ಚಡಿ ಏಟುಗಳನ್ನು ಸ್ವೀಕರಿಸಿದ.

ಇದರ ನಂತರ ಆತನಲ್ಲಿದ್ದ ರಾಷ್ಟ್ರೀಯತೆಯ ಭಾವ ಮತ್ತಷ್ಟು ಹೆಚ್ಚಾಯ್ತು. ಕ್ರಾಂತಿಕಾರ್ಯದಲ್ಲಿ ಸದಾ ಚಟುವಟಿಕೆಯಿಂದಿದ್ದ ರಾಮ್‌ಪ್ರಸಾದ್ ಬಿಸ್ಮಿಲ್ಲರನ್ನು ಭೇಟಿಯಾದ. ಇಲ್ಲಿಂದ ಪ್ರಾರಂಭವಾಯ್ತು ಚಂದ್ರಶೇಖರ್‌ನ ನಿಜವಾದ ಆಟ. ಕಾಕೋರಿ ಲೂಟಿ, ಸ್ಯಾಂಡರ್ಸ್‌ ಹತ್ಯೆ ಹೀಗೆ ಹಲವು ಮೊಕದ್ದಮೆಗಳಲ್ಲಿ ಆತನನ್ನು ಬ್ರಿಟೀಷರು ಹುಡುಕುತ್ತಿದ್ದರೂ ಆತ ಅವರ ಕೈಗೆ ಸಿಗಲೇ ಇಲ್ಲ! ಸೂರ್ಯ ಮುಳುಗದ ಸಾಮ್ರಾಜ್ಯಕ್ಕೆ ಸವಾಲೆಸೆದಿದ್ದ. ಯುವ ಕ್ರಾಂತಿಕಾರಿಗಳ ಪಾಲಿಗೆ ನಾಯಕನಾಗಿ ನಿಂತ. ಬಿಳಿಯರ ನಿದ್ದೆ ಕದ್ದಿದ್ದ!! ಆತ ಬ್ರಿಟೀಷರಿಂದ ಸದಾ ಒಂದು ಹೆಜ್ಜೆ ಮುಂದೆಯೇ ಇರುತ್ತಿದ್ದುದು.

ದುಷ್ಮನೋಂಕಿ ಗೋಲಿಯೋಂಕ ಹಮ್ ಸಾಮ್ನಾ ಕರೇಂಗೆ. ಆಜಾದ್ ಹೀ ರಹೇ ಹಮ್

az4

ಚಂದ್ರಶೇಖರ ಆಜಾದ್ ಎಂದೇ ಹೆಚ್ಚು ಗುರುತಿಸಲ್ಪಡುವ ಚಂದ್ರಶೇಖರ ಸೀತಾರಾಮ್‌‌ ತಿವಾರಿಯವರು 1906ರ ಜುಲೈ 23ರಂದು ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿರುವ ಭಾವ್ರಾ ಎಂಬ ಹಳ್ಳಿಯಲ್ಲಿ ಜನಿಸಿದರು.   ಭಾರತದ ಬಹು ಪ್ರಮುಖ ಕ್ರಾಂತಿಕಾರಿಗಳಲ್ಲಿ ಒಬ್ಬರಾದ ಅವರನ್ನು ಭಗತ್‌‌ ಸಿಂಗ್‌‌ರ ಮಾರ್ಗದರ್ಶಕ, ಗುರು ಎಂದು  ಪರಿಗಣಿಸಲಾಗಿದೆ.

ಶ್ರದ್ಧಾವಂತರಾಗಿದ್ದ ಆಜಾದ್ ಇತರರ ಒಳಿತಿಗಾಗಿ ಹೋರಾಡುವುದು ತಮ್ಮ ಧರ್ಮ ಎಂದು ನಂಬಿದ್ದರು. ಓರ್ವ ಯೋಧ ಎಂದಿಗೂ ಶಸ್ತ್ರವನ್ನು ತ್ಯಜಿಸಲಾರನೆಂಬುದು ಅವರ ಅಭಿಪ್ರಾಯವಾಗಿತ್ತು. 1919ರಲ್ಲಿ ಅಮೃತಸರದಲ್ಲಿ ನಡೆದ ಜಲಿಯನ್‌ವಾಲಾ ಬಾಗ್‌‌‌‌ ಹತ್ಯಾಕಾಂಡದ ಘಟನೆಯಿಂದ ಚಂದ್ರಶೇಖರ ಆಜಾದ್‌‌‌ರವರು ಮಾನಸಿಕವಾಗಿ ತೀವ್ರವಾಗಿ ಜರ್ಜರಿತರಾಗಿದ್ದರು. ಮಹಾತ್ಮಾ ಗಾಂಧಿಯವರು 1921ರಲ್ಲಿ ಅಸಹಕಾರ ಚಳುವಳಿಯನ್ನು ಹಮ್ಮಿಕೊಂಡಾಗ, ನಡೆದ ಪ್ರತಿಭಟನೆಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಕೊಂಡಿದ್ದರು. ಈ ನಾಗರಿಕ ಶಾಸನಭಂಗಕ್ಕಾಗಿ ಅವರು ಬಂಧಿತರಾದುದಲ್ಲದೇ, ತಮ್ಮ ಹದಿನೈದನೇ ವಯಸ್ಸಿನಲ್ಲಿಯೇ  ಶಿಕ್ಷೆಗೆ ಗುರಿಯಾದರು. ಮ್ಯಾಜಿಸ್ಟ್ರೇಟರು ಅವರ ಹೆಸರೇನೆಂದು ಕೇಳಿದಾಗ, ಅವರು ‘ಆಜಾದ್’ ಎಂದು ಹೇಳಿದರು. ಆಜಾದ್ ಎಂದರೆ ‘ಸ್ವತಂತ್ರ ವ್ಯಕ್ತಿ’ ಎಂದು ಅರ್ಥ.  ಈ ಉದ್ಧಟತನಕ್ಕಾಗಿ ಅವರಿಗೆ ಹದಿನೈದು ಛಡಿಏಟುಗಳ ಶಿಕ್ಷೆಯನ್ನು ನೀಡಲಾಯಿತು. ಛಾಟಿಯಿಂದ ಹೊಡೆದ ಪ್ರತಿ ಏಟಿಗೂ ಯುವ ಚಂದ್ರಶೇಖರ ಭಾರತ್‌ ಮಾತಾ ಕಿ ಜೈ ಎಂದು ಘೋಷಣೆ ಮಾಡುತ್ತಿದ್ದರು. ಈ ಘಟನೆಯ ನಂತರ, ಚಂದ್ರಶೇಖರರಿಗೆ ಆಜಾದ್‌‌ ಎಂಬ ಬಿರುದು ಪ್ರಾಪ್ತವಾಯಿತಲ್ಲದೇ ಅವರು ಚಂದ್ರಶೇಖರ ಆಜಾದ್‌‌‌ ಎಂದೇ ಗುರುತಿಸಲ್ಪಡುತ್ತಿದ್ದರು.

ಅಸಹಕಾರ ಚಳುವಳಿ ಸ್ಥಗಿತಗೊಂಡ ನಂತರ, ಇನ್ನೂ ಹೆಚ್ಚಿನ ಆಕ್ರಮಣಶಾಲಿ ಹಾಗೂ ಉಗ್ರ ಕ್ರಾಂತಿಕಾರಿ ಆದರ್ಶಗಳಿಂದ ಆಕರ್ಷಿತರಾದ ಅಜಾದರು, ಯಾವುದೇ ಮಾರ್ಗದಿಂದಾದರೂ ಸಂಪೂರ್ಣ ಸ್ವಾತಂತ್ರ್ಯ ಪಡೆಯುವ ಧ್ಯೇಯಕ್ಕೆ ತಮ್ಮನ್ನು ಮುಡಿಪಾಗಿಡಲು ನಿರ್ಧರಿಸಿದರು. ಈ ನಿಟ್ಟಿನೆಡೆಗೆ ಮುಂದುವರೆಯುವ ಪ್ರಥಮ ಹೆಜ್ಜೆಯಾಗಿ ಅವರು ‘ಹಿಂದೂಸ್ತಾನ್‌‌ ಸೋಷಲಿಸ್ಟ್‌‌ ರಿಪಬ್ಲಿಕನ್‌ ಅಸೋಸಿಯೇಷನ್-‌HSRA’ ಎಂಬ ಸಂಘಟನೆಯನ್ನು ಆರಂಭಿಸಿದರಲ್ಲದೇ ಭಗತ್‌‌ ಸಿಂಗ್‌‌, ಸುಖದೇವ್‌‌, ಬಟುಕೇಶ್ವರ ದತ್ತ ಮತ್ತು ರಾಜ‌ಗುರುರಂತಹಾ ಕ್ರಾಂತಿಕಾರಿಗಳಿಗೆ ಮಾರ್ಗದರ್ಶಕರಾದರು. ಭಾರತಕ್ಕೆ ಸಂಪೂರ್ಣ ಸ್ವಾತಂತ್ರ್ಯ ದೊರಕಿಸಿಕೊಳ್ಳುವುದೇ HSRA ಸಂಘಟನೆಯ ಗುರಿಯಾಗಿತ್ತು. ಅಲ್ಲದೆ, ಸಮಾಜವಾದಿತತ್ವದ ಮೇಲೆ ಆಧಾರಿತವಾದ ನವೀನ ಭಾರತವನ್ನು ಕಟ್ಟುವ ಮಹದುದ್ದೇಶವನ್ನು ಹೊಂದಿತ್ತು. ಆಜಾದರು ಮತ್ತು ಅವರ ದೇಶಬಾಂಧವರು ಬ್ರಿಟಿಷರ ವಿರುದ್ಧ ಅನೇಕ ಕ್ರಾಂತಿಕಾರೀ ಪ್ರತಿಭಟನೆಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ್ದರು. ಕಾಕೊರಿ ರೈಲು ದರೋಡೆ (1925), ವೈಸರಾಯ್‌ರ ರೈಲನ್ನು ಸ್ಫೋಟಿಸಲು ನಡೆಸಿದ ವಿಫಲ ಯತ್ನ (1926), ಮತ್ತು ಲಾಲಾ ಲಜಪತ ರಾಯ್‌‌ರನ್ನು ಕೊಂದುದರ ಪ್ರತೀಕಾರವಾಗಿ ಲಾಹೋರ್‌‌ನಲ್ಲಿ (1928) ಜಾನ್‌ ಪಾಯಂಟ್ಜ್‌ ಸಾಂಡರ್ಸ್‌‌ನನ್ನು ಗುಂಡು ಹಾರಿಸಿ ಕೊಂದಂತಹಾ ಅನೇಕ  ಚಟುವಟಿಕೆಗಳಲ್ಲಿ ಆಜಾದರು ಪ್ರಮುಖ ಪಾತ್ರಧಾರಿಯಾಗಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ