ಒಂದು ಕಾಲದಲ್ಲಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಿದ್ದ ಮೊಹಮ್ಮದ್ ಅಜರುದ್ದೀನ್ ಇದೀಗ ರಾಜಕೀಯ ಕ್ಷೇತ್ರದಲ್ಲಿ ಹೊಸ ಇನ್ನಿಂಗ್ಸ್ ಪ್ರಾರಂಭಿಸಲು ಮುಂದಾಗಿದ್ದಾರೆ. ಹೌದು, ಟೀಮ್ ಇಂಡಿಯಾದ ಮಾಜಿ ನಾಯಕ ಮತ್ತು ತೆಲಂಗಾಣ ಎಂಎಲ್ಸಿ ಅಜರುದ್ದೀನ್ ಅವರಿಗೆ ರಾಜ್ಯಪಾಲರ ಕೋಟಾದಡಿ ಸಚಿವ ಸ್ಥಾನ ನೀಡಲಾಗಿದೆ.
ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ, ಸಚಿವ ಸಂಪುಟ ವಿಸ್ತರಣೆ ಮಾಡುವ ಕುರಿತು ಭಾರೀ ಚರ್ಚೆ ನಡೆಸಿತ್ತು. ಸಂಪುಟದಲ್ಲಿ 15 ಖಾತೆಗಳು ಭರ್ತಿಯಾಗಿದ್ದು, ಖಾಲಿ ಇರುವ ಮೂರು ಖಾತೆಗಳನ್ನು ತುಂಬಲು ಮುಂದಾಗಿತ್ತು.
ಅಜರುದ್ದೀನ್ ಶುಕ್ರವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಜುಬಿಲಿ ಹಿಲ್ಸ್ ವಿಧಾನಸಭಾ ಸ್ಥಾನದಿಂದ ಸ್ಪರ್ಧಿಸಿದ್ದ ಅಜರುದ್ದೀನ್ ಸೋಲು ಅನುಭವಿಸಿದ್ದರು.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





