ಬೆಂಗಳೂರಿನಲ್ಲಿ ಅಂಗಾಂಗ ಕಸಿಗಾಗಿ ವಿಶೇಷ 1000 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್​ಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.

ಬೆಂಗಳೂರಿನ ಇನ್ಸ್‌ಟಿಟ್ಯೂಟ್ ಆಫ್ ಗ್ಯಾಸ್ಟ್ಎಂಟ್ರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್ (IGOT) ಸಂಸ್ಥೆಗೆ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ 10 ಎಕರೆ ಜಮೀನನ್ನು ಎಲ್ಲಾ ಅಂಗಾಂಗ ಕಸಿ ಒಳಗೊಂಡಂತೆ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಆಸ್ಪತ್ರೆ ನಿರ್ಮಾಣಕ್ಕೆ ಅಜೀಂ ಪ್ರೇಮ್‌ಜಿ ಫೌಂಡೇಷನ್​ಗೆ 99 ವರ್ಷಗಳ ಅವಧಿಗೆ ಗುತ್ತಿಗೆ ನೀಡುವ ಬಗ್ಗೆ ಹಾಗೂ ಸಂಸ್ಥೆಯೊಂದಿಗೆ MoU ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ.

ಈ ಕುರಿತು ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ರಾಜ್ಯದಲ್ಲಿ 5,000ಕ್ಕೂ ಹೆಚ್ಚು ಮಂದಿ ಕಿಡ್ನಿ ಹಾಗೂ 1,000 ಕ್ಕಿಂತ ಹೆಚ್ಚು ಲಿವರ್ ಕಸಿಗೆ ಕಾಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಎಲ್ಲಾ ಅಂಗಾಂಗ ಕಸಿ ಒಳಗೊಂಡಂತೆ ಉಚಿತ ಚಿಕಿತ್ಸೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಿದೆ.

ಇದು 1,000 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಲಿದ್ದು, 1,000 ಕೋಟಿ ರೂ. ವೆಚ್ಚದಲ್ಲಿ ವಿಪ್ರೋದವರು ನಿರ್ಮಾಣ ಮಾಡಲಿದ್ದಾರೆ. ಅವರೇ 350 ಕೋಟಿ ರೂ. ನಿರ್ವಹಣಾ ವೆಚ್ಚ ಭರಿಸಲಿದ್ದಾರೆ. ಎಲ್ಲಾ ರೀತಿಯ ಅಂಗಾಂಗ ಕಸಿಯನ್ನು ಈ ಆಸ್ಪತ್ರೆಯಲ್ಲಿ ಮಾಡಲಾಗುವುದು. ಈ ಆಸ್ಪತ್ರೆಯಲ್ಲಿ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಶೇ. 75 ರಷ್ಟು ಉಚಿತ ಸೇವೆ ಇರಲಿದೆ. ಉಳಿದ 30% ಹಾಸಿಗೆ ಕನಿಷ್ಠ ವೆಚ್ಚ ಇರಲಿದೆ. ಮೂರು ವರ್ಷದಲ್ಲಿ 300 ಹಾಸಿಗೆ ನಿರ್ಮಿಸಲಾಗುವುದು. ಉಳಿದಂತೆ ಐದು ವರ್ಷದಲ್ಲಿ 1,000 ಬೆಡ್ ನಿರ್ಮಾಣ ಪೂರ್ಣವಾಗಲಿದೆ ಎಂದು ವಿವರಿಸಿದರು‌.

ವೈದ್ಯಕೀಯ ಶಿಕ್ಷಣ ಸಚಿವರು, ಇಲಾಖೆ ಕಾರ್ಯದರ್ಶಿ ಮತ್ತು ಹಣಕಾಸು ಕಾರ್ಯದರ್ಶಿ ಆಸ್ಪತ್ರೆ ಮಂಡಳಿಯಲ್ಲಿರುತ್ತಾರೆ, ಇದನ್ನು ಪ್ರತಿಷ್ಠಾನದ ಹೆಸರಿಡಲಾಗುವುದು ಎಂದು ಅವರು ಹೇಳಿದರು.

ಗ್ಯಾಸ್ಟ್ರೋಎಂಟರಾಲಜಿ ವಿಜ್ಞಾನ ಮತ್ತು ಅಂಗಾಂಗ ಕಸಿ ಸಂಸ್ಥೆ (IGOT ಆಸ್ಪತ್ರೆ) ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ ಮತ್ತು ಭವಿಷ್ಯದಲ್ಲಿ ಫೌಂಡೇಶನ್ ಆಸ್ಪತ್ರೆಯಿಂದ ಸ್ವಾಧೀನಪಡಿಸಿಕೊಳ್ಳುತ್ತದೆ ಎಂದು ಅವರು ಹೇಳಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ