ಕನ್ನಡದ ಬರಹಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮತ್ತು ವಕೀಲೆ ಬಾನು ಮುಸ್ತಾಕ್ ಅವರ ಸಣ್ಣ ಕಥಾ ಸಂಕಲನ 'ಹಾರ್ಟ್ ಲ್ಯಾಂಪ್' ಲಂಡನ್‌ನಲ್ಲಿ ನಡೆಯಲಿರುವ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಲಾಂಗ್ ಲಿಸ್ಟ್‌ನಲ್ಲಿ ಸೇರ್ಪಡೆಯಾಗಿದೆ.

ಇದನ್ನು ಪತ್ರಕರ್ತೆ ದೀಪಾ ಭಸ್ತಿ ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ವಿಶ್ವಾದ್ಯಂತ ಆಯ್ಕೆಯಾದ 13 ಕೃತಿಗಳಲ್ಲಿ ಒಂದಾಗಿರುವ ಮುಸ್ತಾಕ್ ಅವರ ಕೃತಿಯು ಕುಟೌಂಬಿಕ ಮತ್ತು ದಕ್ಷಿಣ ಭಾರತದ ಮುಸ್ಲಿಂ ಸಮುದಾಯದ ಉದ್ವಿಗ್ನತೆಗಳು, ತಲ್ಲಣಗಳನ್ನು ಇದರಲ್ಲಿ ಅನಾವರಣಗೊಳಿಸಲಾಗಿದೆ.

ರೋಮಾಂಚಕ ಕೃತಿಯ ಚಮತ್ಕಾರಿ, ಹೃದಯಸ್ಪರ್ಶಿ ಮತ್ತು ಬರವಣಿಗೆಯ ಶೈಲಿ ನಿರ್ಣಾಯಕರನ್ನು ಆಕರ್ಷಿಸಿದೆ ಎನ್ನಲಾಗಿದೆ. ಕನ್ನಡದ ಅನುವಾದಿತ ಕೃತಿಯೊಂದು ಈ ಪ್ರಶಸ್ತಿಯ ರೇಸ್‌ನಲ್ಲಿರುವುದು ಇದೇ ಮೊದಲು. ಹಾರ್ಟ್ ಲ್ಯಾಂಪ್ ಕೃತಿಯಲ್ಲಿ 12 ಸಣ್ಣ ಕಥೆಗಳಿವೆ. ದಕ್ಷಿಣ ಭಾರತದ ಮುಸ್ಲಿಂ ಸಮುದಾಯದ ಅಂತರಂಗವನ್ನು ಲೇಖಕಿ ಅಪರೂಪದ ಕಥೆಗಳ ಮೂಲಕ ತೆರೆದಿಟ್ಟಿದ್ದಾರೆ.

Banu-1

ಕೃತಿಯ ಕುರಿತು ಮಾತನಾಡಿರುವ 2025ರ ಬೂಕರ್‌ ಪ್ರಶಸ್ತಿಯ ತೀರ್ಪುಗಾರರ ಸಮಿತಿಯ ಅಧ್ಯಕ್ಷರಾದ ಮ್ಯಾಕ್ಸ್ ಪೋರ್ಟರ್, 'ಈ ಕೃತಿಯು ನಮ್ಮ ನಮ್ಮ ನಡುವೆ ನಿರ್ಮಾಣವಾಗಿರುವ ಗಡಿಗಳನ್ನು ಧಿಕ್ಕರಿಸಲು ಒಂದು ಅದ್ಭುತ ಮಾರ್ಗವಾಗಿದೆ' ಎಂದಿದ್ದಾರೆ.

ಆಯ್ಕೆ ಪ್ರಕ್ರಿಯೆ ನಡೆಯುವುದು ಹೇಗೆ?:

ಲಾಂಗ್‌ಲಿಸ್ಟ್‌ನಲ್ಲಿರುವ 13 ಕೃತಿಗಳ ಪೈಕಿ 6 ಕೃತಿಗಳನ್ನು ಎರಡನೇ ಸುತ್ತಿಗೆ ಆಯ್ಕೆ ಮಾಡಿ ಏ.8ರಂದು ಘೋಷಿಸಲಾಗಿತ್ತು. ಈ ಸುತ್ತಿಗೆ ಆಯ್ಕೆಯಾದ ಪ್ರತಿ ಕೃತಿಗೆ 5,51,387 ರೂ. ಬಹುಮಾನ ಮೊತ್ತ ಸಿಗಲಿದೆ. ಇದು ಲೇಖಕ ಮತ್ತು ಅನುವಾದಕ ಇಬ್ಬರಿಗೂ ಹಂಚಿಕೆಯಾಗುತ್ತದೆ. ಎರಡನೇ ಸುತ್ತಿಗೆ ಆಯ್ಕೆಯಾದ 6 ಕೃತಿಗಳಲ್ಲಿ ಅಂತಿಮವಾಗಿ ಒಂದು ಕೃತಿಗೆ 2025ನೇ ಸಾಲಿನ ಬೂಕರ್‌ಪ್ರಶಸ್ತಿ ಘೋಷಿಸಲಾಗುತ್ತದೆ. ಮೇ 20ರಂದು ಲಂಡನ್‌ನ ಟೇಟ್ ಮಾಡರ್ನ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯ ಘೋಷಣೆ ನಡೆಯಲಿದೆ. ವಿಜೇತ ಲೇಖಕರಿಗೆ ಮತ್ತು ಅನುವಾದಕರಿಗೆ ತಲಾ 27,58,110 ರೂ.  ಬಹುಮಾನ ಸಿಗಲಿದೆ.

ಕನ್ನಡ ಸಾಹಿತ್ಯಕ್ಕೆ ಹೆಮ್ಮೆಯ ಕ್ಷಣ ಎಂದ ಸಿಎಂ

ಬಾನು ಮುಷ್ತಾಕ್‌ ಅವರ ಸಣ್ಣ ಕತೆಗಳ ಅನುವಾದಿತ ಸಂಕಲನ 'ಹಾರ್ಟ್‌ ಲ್ಯಾಂಪ್‌' ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್‌ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

Banu

ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಬಾನು ಮುಷ್ತಾಕ್ ಅವರ ಕಥಾ ಸಂಕಲನ‌ ಆಯ್ಕೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕನ್ನಡ ಸಾಹಿತ್ಯಕ್ಕೆ ಹೆಮ್ಮೆಯ ಕ್ಷಣ! ಬಾನು ಮುಷ್ತಾಕ್ ಅವರ ಕನ್ನಡ ಸಣ್ಣ ಕಥಾ ಸಂಕಲನವು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ದೀರ್ಘ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ನಮ್ಮ ಭಾಷೆ ಮತ್ತು ಸಂಸ್ಕೃತಿಗೆ ನಿಜವಾದ ಗೌರವ! ಈ ಮನ್ನಣೆಯು ಕನ್ನಡ ಕಥೆ ಹೇಳುವಿಕೆಯ ಜಾಗತಿಕ ಮೆಚ್ಚುಗೆಗೆ ದಾರಿ ಮಾಡಿಕೊಡುತ್ತದೆ. ಹೃತ್ಪೂರ್ವಕ ಅಭಿನಂದನೆಗಳು! ಎಂದು ಹೇಳಿದ್ದಾರೆ.

********************************

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ