2025ನೇ ಸಾಲಿನ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರಿಂದ ಮೈಸೂರು ದಸರಾ ಉದ್ಘಾಟನೆ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಈ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್‌, ಹಿಂದೂಯೇತರ ಮಹಿಳೆಯಿಂದ ಪೂಜೆ ಮಾಡಿಸುವುದು ಸರಿಯಲ್ಲ ಎಂಬ ಅರ್ಜಿದಾರರ ವಾದವನ್ನು ಒಪ್ಪಿಕೊಂಡಿಲ್ಲ.

ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಮತ್ತು ಸಂದೀಪ್‌ ಮೆಹ್ತಾ ಅವರಿದ್ದ ದ್ವಿಸದಸ್ಯ ಪೀಠ, ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.

ಲೇಖಕಿ ಮತ್ತು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರು ಈ ಹಿಂದೆ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡಿದ್ದು, ಅವರಿಂದ ದಸರಾ ಉದ್ಘಾಟನೆ ಮಾಡಿಸಬಾರದು ಎಂದು ಆಗ್ರಹಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

2025ರ ನಾಡಹಬ್ಬ ಮೈಸೂರು ದಸಾರಾವನ್ನು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರಿಂದ ಉದ್ಘಾಟಿಸುವ ಕರ್ನಾಟಕ ರಾಜ್ಯ ಸರ್ಕಾರದ ತೀರ್ಮಾನವನ್ನು ವಿರೋಧಿಸಿ, ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್‌ ದ್ವಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಮತ್ತು ಸಂದೀಪ್‌ ಮೆಹ್ತಾ ಅವರಿದ್ದ ದ್ವಿಸದಸ್ಯ ಪೀಠ, ಅರ್ಜಿದಾರರ ವಾದವನ್ನು ಒಪ್ಪಿಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಿಪಿ ಸುರೇಶ್‌, “ಹಿಂದೂಯೇತರ ವ್ಯಕ್ತಿಗಳಿಂದ ನಾಡದೇವತೆಗೆ ಪೂಜೆ ಮಾಡಿಸುವುದು ಸರಿಯಲ್ಲ” ಎಂದು ಪ್ರತಿಪಾದಿಸಿದರು. ಆದರೆ ಪೀಠವು ಈ ವಾದವನ್ನು ಒಪ್ಪದೇ, ಅರ್ಜಿಯನ್ನು ತಿರಸ್ಕರಿಸುವ ಆದೇಶವನ್ನು ಪ್ರಕಟಿಸಿದರು.

ಇದಕ್ಕೂ ಮುನ್ನ ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರೋಧಿಸಿ, ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರತಾಪ್​ ಸಿಂಹ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಇದೀಗ ಸುಪ್ರೀಂಕೋರ್ಟ್‌ ಕೂಡ ಈ ಕುರಿತ ಅರ್ಜಿಯನ್ನು ತಿರಸ್ಕರಿಸಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ