ಕನ್ನಡದ ಪ್ರಮುಖ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯ ದೊರೆತಿದೆ. ಸಣ್ಣ ಕತೆಗಳ ಅನುವಾದಿತ ಸಂಕಲನವಾಗಿರುವ "ಹಾರ್ಟ್‌ ಲ್ಯಾಂಪ್"ಗೆ ಈ ಪ್ರಶಸ್ತಿ ಸಂದಿದೆ.

ಕನ್ನಡದ ಕೃತಿಯೊಂದಿಗೆ ಈ ಪ್ರಶಸ್ತಿ ಸಿಕ್ಕಿರುವುದು ಇದೇ ಮೊದಲು. ಹೀಗಾಗಿ, ಈ ಪ್ರಶಸ್ತಿ ಕನ್ನಡಿಗರಲ್ಲಿ ಪುಳಕವನ್ನುಂಟು ಮಾಡಿದೆ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾರೀ ಪೈಪೋಟಿ ಹಾಗೂ ಸ್ಪರ್ಧೆ ಇರುತ್ತದೆ. ಇಷ್ಟೊಂದು ಸ್ಪರ್ಧೆಗಳ ನಡುವೆ ಪ್ರಶಸ್ತಿ ಕನ್ನಡತಿಗೆ ಸಂದಿರುವುದು ಕನ್ನಡಿಗರ ಹೆಮ್ಮೆ.ಕೆಲವೇ ದಿನಗಳ ಹಿಂದೆ ಬೂಕರ್ ಪ್ರಶಸ್ತಿ ನನಗೆ ಸಿಗಲೆಂದು ಪ್ರಾರ್ಥಿಸಿ ಎಂದು ಮುಷ್ತಾಕ್ ಅವರು ಹೇಳಿದ್ದರು. ಬೂಕರ್‌ ಪ್ರಶಸ್ತಿಯ ಅಂತಿಮ ಪಟ್ಟಿಯಲ್ಲಿನ 6 ಪ್ರಮುಖ ಕೃತಿಗಳಲ್ಲಿ ಅವರ ಹಾರ್ಟ್‌ ಲ್ಯಾಂಪ್‌ ಕಥಾಗುಚ್ಛವೂ ಒಂದಾಗಿತ್ತು. ಪ್ಲೀಸ್‌.. ಪ್ರೇ ಫಾರ್‌ ಮೀ... ನನಗಾಗಿ ಪ್ರಾರ್ಥಿಸಿ ಎಂದು ಅವರು ವಿನಮ್ರವಾಗಿ ಹೇಳಿದ್ದರು. ಮುಷ್ತಾಕ್‌ ಅವರ ಪರಿಶ್ರಮ ಹಾಗೂ ಕಲೆಯೊಂದಿಗೆ, ಕನ್ನಡಿಗರ ಪ್ರಾರ್ಥನೆಯೂ ಸೇರಿದೆ ಎನ್ನುವಂತೆ ಅವರಿಗೆ ಬೂಕರ್‌ ಪ್ರಶಸ್ತಿ ಲಭಿಸಿದೆ. ಈ ಮೂಲಕ ಕನ್ನಡದ ಕೃತಿಯೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿದೆ.

12 ಕಥೆಗಳ ಗುಚ್ಛ: ಇನ್ನು ಇದು 12 ಕಥೆಗಳ ಗುಚ್ಛವಾಗಿದೆ. 1990 ಹಾಗೂ 2023ರ ನಡುವೆ ಪ್ರಕಟವಾಗಿದ್ದ 12 ಕತೆಗಳನ್ನು ಒಳಗೊಂಡಿರುವ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು.

ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕಿಗೆ ಸಂಬಂಧಿಸಿದ ವಿಷಯಗಳ ಮೇಲೆ ಈ ಕತೆಗಳು ಕೇಂದ್ರೀಕೃತವಾಗಿವೆ.ಕನ್ನಡಕ್ಕೆ ಸಂದ ಗೌರವ: ಬೂಕರ್ ಪ್ರಶಸ್ತಿ ಪ್ರತಿ ಸಾಹಿತಿಯ ಕನಸು. ಬೂಕರ್ ಪ್ರಶಸ್ತಿಯ ಕನಸನ್ನು ಕನ್ನಡಿಗರೂ ಕಂಡಿದ್ದರು. ಅದು ಮೊದಲ ಬಾರಿ ಈಡೇರಿದೆ. ಪ್ರಶಸ್ತಿಯ ಮೊತ್ತವು ಅಂದಾಜು 57.28 ಲಕ್ಷ ರೂಪಾಯಿ ಆಗಿದೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುಷ್ತಾಕ್ , ಯಾವ ಕಥೆಯೂ ಸಣ್ಣದಲ್ಲ. ಪ್ರತಿ ಸಣ್ಣ ವಿಷಯವೂ ಇಡೀ ಕಥೆಯ ತೂಕವನ್ನು ಒಳಗೊಂಡಿರುತ್ತದೆ ಎನ್ನುವುದು ನನ್ನ ನಂಬಿಕೆ. ಅದರಂತೆಯೇ ಈ ಪುಸ್ತಕ ಬಂದಿದೆ ಎಂದು ಹೇಳಿದರು. ಈ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಕಥೆಗಳನ್ನು ಅನುವಾದ ಮಾಡಿರುವ ಅನುವಾದಕಿ ಭಸ್ತಿ ಹರ್ಷ ಅವರು, ಇದು ನನ್ನ ಸುಂದರ ಭಾಷೆಗೆ ದೊರೆತ ಅತ್ಯಂತ ಸೊಗಸಾದ ಗೆಲುವು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಭಿನಂದನೆ!

ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ 'ಹೃದಯ ದೀಪ'ವನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ