ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೃತೀಯ ಲಿಂಗಿಗಳಿಂದ ಕಿರುಕುಳ ಮತ್ತು ದುಡ್ಡಿಗಾಗಿ ಸಾರ್ವಜನಿಕರಿಗೆ ಕಾಟ ಕೊಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಲೇ ಇರುತ್ತವೆ. ಈ ಹಿನ್ನೆಲೆ ಬೆಂಗಳೂರು ನಗರ ಪೊಲೀಸರು ತೃತೀಯ ಲಿಂಗಿಗಳ ಕಿರಿಕಿರಿಗೆ ಬ್ರೇಕ್ ಹಾಕಲು ಮುಂದಾಗಿದ್ದು, ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್​ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ತೃತೀಯ ಲಿಂಗಿಗಳಿಂದ ಕಿರುಕುಳವಾದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್​​ ಇಲಾಖೆ ಎಚ್ಚರಿಕೆ ನೀಡಿದೆ.

ಸಿಗ್ನಲ್‌ಗಳು, ಮಾರುಕಟ್ಟೆಗಳು, ಗೃಹಪ್ರವೇಶ, ಮದುವೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಬಲವಂತದ ಹಣ ವಸೂಲಿ ಮಾಡುವಂತಿಲ್ಲ. ಹಣ ವಸೂಲಿ‌ ನೆಪದಲ್ಲಿ ತೊಂದರೆ ಕೊಡುವುದು, ಬೆದರಿಕೆ ಹಾಕುವವರ ವಿರುದ್ಧ ತಕ್ಷಣ ಕಾನೂನು ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಎಲ್ಲಾ ಪೊಲೀಸ್ ಠಾಣೆಗೂ ಕಮಿಷನರ್ ಸೀಮಂತ್​​ ಕುಮಾರ್​ ಅವರಿಂದ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ಅಡ್ಡಿಪಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಮತ್ತು ಸಿಗ್ನಲ್​ಗಳಂತಹ ಸೂಕ್ಷ್ಮ ಪ್ರದೇಶಗಳಲ್ಲಿಯೂ ಪೊಲೀಸರ ಹದ್ದಿನ ಕಣ್ಣಿಟ್ಟಿದ್ದು, ತೊಂದರೆ ಕೊಡುವ ತೃತೀಯ ಲಿಂಗಿಗಳ ವಿರುದ್ಧ ಕ್ರಮಕ್ಕೆ ಪೊಲೀಸ್​ ಅಧಿಕಾರಿಗಳು ವಿಶೇಷ ರೌಂಡ್ಸ್ ಕೈಗೊಳ್ಳಲಿದ್ದಾರೆ.ಜಾಗೃತಿ ಮೂಡಿಸಲು ನಿರ್ಧಾರ: ಪದೇ ಪದೇ ದೂರು ಬರುವ ಸ್ಪಾಟ್‌ಗಳನ್ನೇ ಟಾರ್ಗೆಟ್ ಮಾಡಿರುವ ಪೊಲೀಸರು, ದೂರುಗಳು ಹೆಚ್ಚಾಗಿ ಕೇಳಿಬರುತ್ತಿರುವ ಜಾಗಗಳಲ್ಲಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲು ತೀರ್ಮಾನಿಸಿದೆ.

ಇದರ ಜೊತೆಗೆ ತೃತೀಯಲಿಂಗಿಗಳ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲು ಪೊಲೀಸ್​ ಇಲಾಖೆ  ನಿರ್ಧರಿಸಿದ್ದು, ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ಹಾಗೂ ಜಾಗೃತಿ ಮೂಡಿಸಲು ನಿರ್ಧಾರ ಮಾಡಿದೆ. ಸಾರ್ವಜನಿಕರು ತೃತೀಯಲಿಂಗಿಗಳಿಂದ ಕಿರುಕುಳ ಅಥವಾ ಬಲವಂತದ ವಸೂಲಿ ಮಾಡಿದರೆ ಕೂಡಲೇ 112ಗೆ ದೂರು ನೀಡಬಹುದು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ