ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆಯಲ್ಲಿ ಮುದ್ರಿಸಲಾಗಿದೆ. ಹೊನ್ನಿನ ಭಗವದ್ಗೀತೆ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತರಲಿದ್ದಾರೆ.

ಇದೇ ಗುರುವಾರ ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳ್ಳಲಿದೆ. ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ.

ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ ಭಕ್ತರೊಬ್ಬರು ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ದಪಡಿಸಿರುವ ಹೊನ್ನಿನ ಭಗವದ್ಗೀತಾ ಹೊತ್ತಿಗೆ ಅಂದು ಸಂಜೆ 5 ಗಂಟೆಗೆ ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆಯಲ್ಲಿ ಮುದ್ರಿಸಲಾಗಿದೆ. ಹೊನ್ನಿನ ಭಗವದ್ಗೀತೆ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಯಾಗಲಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ