ಬೆಂಗಳೂರಿನ ಪ್ರಮುಖ ಜಂಕ್ಷನ್ ಕೆ.ಆರ್. ಸರ್ಕಲ್ (ಕೃಷ್ಣರಾಜೇಂದ್ರ ವೃತ್ತ) ಬಳಿ ಇಂದು ಬೆಳಗ್ಗೆ ಎರಡು ಬಿಎಂಟಿಸಿ (BMTC) ಬಸ್‌ಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶನಿವಾರ ಬೆಳಗಿನ ಜಾವ ಎಂದಿನಂತೆ ಕೆ ಆರ್ ಸರ್ಕಲ್ ಬಳಿ ಸಂಚಾರ ದಟ್ಟಣೆ ಇತ್ತು. ಕೆ.ಆರ್. ಸರ್ಕಲ್ ಜಂಕ್ಷನ್‌ನ ಸಿಗ್ನಲ್‌ನಲ್ಲಿ ಬಿಎಂಟಿಸಿಯ ‘ವಾಯು ವಜ್ರ’ ಬಸ್ ನಿಂತಿತ್ತು. ಇದೇ ವೇಳೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಮತ್ತೊಂದು ಸಾಮಾನ್ಯ ಬಿಎಂಟಿಸಿ ಬಸ್, ಸಿಗ್ನಲ್‌ನಲ್ಲಿ ನಿಂತಿದ್ದ ವಾಯು ವಜ್ರ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಾಮಾನ್ಯ ಬಿಎಂಟಿಸಿ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಬಸ್‌ ಚಾಲಕ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಮಹಿಳೆಗೆ ಕಾಲು ಸಿಕ್ಕಿಹಾಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಬ್ಬಿಣದ ಸಲಾಕೆಗಳನ್ನು ತುಂಡರಿಸಿ ಮಹಿಳೆಯನ್ನು ಹೊರಕ್ಕೆ ತೆಗೆಯಲಾಯಿತು.

ಬೆಳಗ್ಗಿನ ಅವಧಿಯಾಗಿದ್ದರಿಂದ ಬಸ್‌ಗಳಲ್ಲಿ ಕಚೇರಿ ಹಾಗೂ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದ್ದಕ್ಕಿದ್ದಂತೆ ಸಂಭವಿಸಿದ ಈ ಅಪಘಾತದಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತೀವ್ರ ತೊಂದರೆಯುಂಟಾಯಿತು. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗದ ಸೀಟುಗಳಲ್ಲಿದ್ದ ಹಲವು ಮಹಿಳಾ ಪ್ರಯಾಣಿಕರಿಗೆ ತಲೆ ಹಾಗೂ ಕೈಕಾಲುಗಳಿಗೆ ಗಾಯಗಳಾಗಿವೆ.

ಕೆ.ಆರ್. ಸರ್ಕಲ್‌ನಲ್ಲಿ ಸಂಭವಿಸಿದ ಅಪಘಾತದ ಪರಿಣಾಮ ಇಡೀ ರಸ್ತೆಯಲ್ಲಿ ಟ್ರಾಫಿಕ್ ಜಾಮ್​ ಉಂಟಾಯಿತು. ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ