ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಬಸ್‌ಗಳಲ್ಲಿ ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾರಿಗೆ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಇನ್ನು ಮುಂದೆ ರಾಜ್ಯದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಸೇರಿದಂತೆ ಎಲ್ಲಾ ಪ್ರಯಾಣಿಕ ವಾಹನಗಳಲ್ಲಿ ನಿಗದಿತ ಆಸನ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಜನರನ್ನು ಕರೆದೊಯ್ಯಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರು ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ (RTO) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಾಮಾನ್ಯ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಸುಮಾರು 55 ಪ್ರಯಾಣಿಕರು ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಸುಮಾರು 40 ಪ್ರಯಾಣಿಕರನ್ನು ಕರೆದೊಯ್ಯುವ ಸಾಮರ್ಥ್ಯವಿದೆ. ಆದರೆ ಕೆಲ ಬಸ್‌ಗಳಲ್ಲಿ ಈ ಮಿತಿಗಿಂತ ದುಪ್ಪಟ್ಟು ಜನರು ಪ್ರಯಾಣಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬಸ್‌ಗಳ ಬಾಗಿಲುಗಳಲ್ಲಿ ನೇತಾಡಿಕೊಂಡು ಪ್ರಯಾಣಿಸುವುದರಿಂದ ಅಪಘಾತದ ಅಪಾಯವೂ ಹೆಚ್ಚುತ್ತಿದೆ.

ನಿಯಮ ಉಲ್ಲಂಘಿಸಿದರೆ ಕ್ರಮ
ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳ ವಿರುದ್ಧ ಅಧಿಕಾರಿಗಳು ತಪಾಸಣೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಅಲ್ಲದೆ, ಸಾರಿಗೆ ನಿಗಮಗಳಿಗೂ ಈ ನಿಯಮದ ಕುರಿತು ಸೂಕ್ತ ಅರಿವು ಮೂಡಿಸಬೇಕು. ಮುಂಬರುವ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡುವಂತೆ ಆಯುಕ್ತರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಶಕ್ತಿ ಯೋಜನೆಯಿಂದ ಹೆಚ್ಚಿದ ಪ್ರಯಾಣಿಕರ ದಟ್ಟಣೆಗೆ ಕಡಿವಾಣ ಹಾಕುವ ಜೊತೆಗೆ ಬಸ್ ಪ್ರಯಾಣವನ್ನು ಸುರಕ್ಷಿತಗೊಳಿಸುವುದು ಈ ಕ್ರಮದ ಉದ್ದೇಶವಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ