ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರುಲಹಳ್ಳಿ ಗೇಟ್ ಬಳಿ ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಕಾರಿನ ಟೈರ್ ಸ್ಫೋಟಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ  ಎಂದು ಪೊಲೀಸರು ಹೇಳಿದ್ದಾರೆ.

ಮೃತರೆಲ್ಲರೂ ಚಳ್ಳಕೆರೆ ಪಟ್ಟಣದ ನಿವಾಸಿಗಳಾಗಿದ್ದು, ಅವರನ್ನು ಪ್ರಮೋದ್, ರಾಘವೇಂದ್ರ, ಮಲ್ಲಿಕಾರ್ಜುನ್, ಸೋಮ ಮತ್ತು ರುದ್ರೇಶ್ ಮೃತಪಟ್ಟಿದ್ದು, ಇವರೆಲ್ಲರೂ ಚಳ್ಳಕೆರೆ ಪಟ್ಟಣದವರು ಎನ್ನಲಾಗಿದೆ.

ಬಳ್ಳಾರಿಯಿಂದ ಚಳ್ಳಕೆರೆಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಸಂಬಂಧ ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ