ಸಿಇಟಿ ಪರೀಕ್ಷೆಯಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸಬೇಕು, ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂಪಾಯಿ ದಂಡ ವಿಧಿಸಬೇಕೆಂದು ಒತ್ತಾಯಿಸಲಾಗಿದೆ.

ಅತಿಕ್ರಮ ಎಂದ ಮಹಾಸಭಾ: ಸಿಇಟಿ ಪರೀಕ್ಷಾರ್ಥಿಗಳಲ್ಲಿ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರುವುದು ಏಕೆ ಎಂದು ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ರಘುನಾಥ್ ತಿಳಿಸಿದ್ದಾರೆ.

 

2025ರ ಡಿಸೆಂಬರ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಇದೀಗ ಮತ್ತೆ ಇದೇ ರೀತಿಯ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ