ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಚಂದ್ರನಾಥ್ ದತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದ ಈ ಗುಂಡಿನ ದಾಳಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬಿಜೆಪಿ ಇದನ್ನು “ಗುರಿಯಾಗಿಸಿ ನಡೆಸಿದ ಹತ್ಯೆ” ಎಂದು ಆರೋಪಿಸಿದ್ದು, ಘಟನೆ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಮಧ್ಯಮಗ್ರಾಮ, ದೋಹಾರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು. ಇದರ ಬೆನ್ನಲ್ಲೇ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ ಸುಮಾರು 10.30ರ ವೇಳೆಗೆ ಚಂದ್ರನಾಥ್ ದತ್ ಅವರು ಕೊಲ್ಕತ್ತಾದಿಂದ ಮಧ್ಯಮಗ್ರಾಮದಲ್ಲಿರುವ ತಮ್ಮ ಮನೆಗೆ ಕಾರಿನಲ್ಲಿ ಮರಳುತ್ತಿದ್ದರು. ಈ ವೇಳೆ ದೋಲ್ತಾಲಾ ಪ್ರದೇಶದ ಬಳಿ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಅವರ ವಾಹನವನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಚಂದ್ರನಾಥ್ ದತ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ಬುದ್ಧದೇವ್ ಬೆರಾ ಕೂಡ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಪ್ರಕಾರ, ದಾಳಿಕೋರರು 6ರಿಂದ 10 ಸುತ್ತು ಗುಂಡು ಹಾರಿಸಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಆರೋಪಿಗಳು ಹೆಲ್ಮೆಟ್ ಧರಿಸಿದ್ದರ ಜೊತೆಗೆ ನಕಲಿ ನಂಬರ್ ಪ್ಲೇಟ್ ಹೊಂದಿದ್ದ ಬೈಕ್‌ಗಳನ್ನು ಬಳಸಿದ್ದರು ಎನ್ನಲಾಗಿದೆ. ದಾಳಿಯಲ್ಲಿ ಆರೋಪಿಗಳು ಅತ್ಯಾಧುನಿಕ ಬಂದೂಕುಗಳನ್ನು ಬಳಸಿದ್ದಾರೆ. ಸ್ಥಳದಲ್ಲಿ ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ವರದಿ ಪ್ರಕಾರ, ದುಷ್ಕರ್ಮಿಗಳು ಗ್ಲಾಕ್ 47X ಮಾದರಿಯ ಆಧುನಿಕ ಪಿಸ್ತೂಲ್‌ಗಳನ್ನು ಬಳಸಿರಬಹುದು ಎಂದು ಶಂಕಿಸಲಾಗಿದೆ.

ಇಂತಹ ಶಸ್ತ್ರಾಸ್ತ್ರಗಳನ್ನು ಸಾಮಾನ್ಯ ಅಪರಾಧಿಗಳು ಬಳಸುವುದಿಲ್ಲ. ವೃತ್ತಿಪರ ಶೂಟರ್‌ಗಳ ಕೈವಾಡವಿದೆಯೇ ಎಂಬುದನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿದ್ಧಿನಾಥ್ ಗುಪ್ತಾ ಹಾಗೂ ಸಿಆರ್‌ಪಿಎಫ್ ಮಹಾನಿರ್ದೇಶಕರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತನಿಖೆ ಹಲವು ದಿಕ್ಕುಗಳಲ್ಲಿ ಸಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣಾ ಫಲಿತಾಂಶಗಳ ಘೋಷಣೆಯ ಎರಡು ದಿನಗಳ ನಂತರ ಈ ಹತ್ಯೆ ನಡೆದಿದ್ದು, ಇದು ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಹಾಗೂ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಈ ಘಟನೆ ಟಿಎಂಸಿ ಪ್ರತೀಕಾರ ರಾಜಕೀಯ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಇದಕ್ಕೆ ಪ್ರತಿಯಾಗಿ ಟಿಎಂಸಿ ಕೂಡ ತಮ್ಮ ಪಕ್ಷದ ಕಾರ್ಯಕರ್ತರ ಮೇಲೂ ಹಲವು ಜಿಲ್ಲೆಗಳಲ್ಲಿ ದಾಳಿಯಾಗಿದೆ ಎಂದು ಆರೋಪಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ