ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನ, ಅವರ ನಿರ್ಗಮನದ ನೋವನ್ನು ಹೊತ್ತು ತಂದಿದೆ. ಚೆನ್ನಮ್ಮ ಅವರೊಂದಿಗೆ ಒಡನಾಟ ಹೊಂದಿದ್ದ ಎಲ್ಲರೂ, ಅವರ ನಿಧನಕ್ಕೆ ಕಂಬನಿ ಸುರಿಸುತ್ತಿದ್ದಾರೆ. ಪಕ್ಷಾತೀತವಾಗಿ ನಾಯಕರು ಮತ್ತು ಅಪಾರ ಜನ ದೇವೇಗೌಡ ಅವರ ಮನೆಗೆ ಭೇಟಿ ನೀಡುತ್ತಿದ್ದು, ಮಾತೃಸ್ವರೂಪಿ ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಶನಿವಾರ ರಾತ್ರಿ ಹಚ್‌ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಗೌಡರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕುಟುಂಬ ಬಯಸಿದ ಸ್ಥಳದಲ್ಲಿ ಮತ್ತು ಸಮಯದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಸುವ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಅದರಂತೆ ನಾಳೆ (ಜುಲೈ 20) ಹಾಸನದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ. ಚೆನ್ನಮ್ಮ ಪಾರ್ಥಿವ ಶರೀರ ಈಗಾಗಲೇ ಹಾಸನ ಜಿಲ್ಲೆಯ ಹೊಳೆನೆಸೀಪುರದಲ್ಲಿರುವ ಹೆಚ್‌ಡಿ ರೇವಣ್ಣ ಅವರ ಮನೆ ತಲುಪಿದ್ದು, ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದಕ್ಕೂ ಮುನ್ನ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್‌ ಡಿ ದೇವೇಗೌಡ ಅವರ ನಿವಾಸದಲ್ಲಿ, ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರವರೆಗೆ ಚೆನ್ನಮ್ಮ ಅಂತಿಮ ಯಾತ್ರೆ ಮೆರವಣಿಗೆ ನಡೆದಿದ್ದು, ಮಾರ್ಗ ಮಧ್ಯೆ ಸುಮಾರು 10 ಸ್ಥಳಗಳಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಾಳೆ ಬೆಳಗ್ಗೆ 7 ಗಂಟೆಯಿಂದ 9:30ರವರೆಗೆ, ಹೆಚ್‌ಡಿ ರೇವಣ್ಣ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ 11:30ಕ್ಕೆ ಕ್ಕೆ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಗೆ ಮೃತದೇಹ ತಲುಪಲಿದೆ. ಮಧ್ಯಾಹ್ನ 2ರಿಂದ ಸಂಜೆ 4:15ರವರೆಗೆ ಅಂತ್ಯಕ್ರಿಯೆ ವಿಧಿವಿಧಾನಗಳು ನಡೆಯಲಿವೆ ಎಂದು ಕುಟುಂಬದ ಮೂಲಗಳು ನಡೆಯಲಿವೆ.

ಕುಟುಂಬಸ್ಥರಿಂದ ಅಂತಿಮ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ, ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವ ವಂದನೆ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಲಿವೆ.

ಚೆನ್ನಮ್ಮ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ, ಹಾಸನ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧಿಸಲಾಗಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ, ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಗಿ ಪೊಲೀಸ್‌ ಭದ್ರತೆಯನ್ನೂ ಕೂಡ ಒದಗಿಸಲಾಗಿದೆ.

ಚೆನ್ನಮ್ಮ ನಿಧನದ ಸುದ್ದಿ ತಿಳಿಯುತ್ತಿದ್ದಂತೇ, ವಿವಿಧ ರಾಜಕೀಯ ಪಕ್ಷಗಳು ಧುರೀಣರು ಹೆಚ್‌ಡಿ ದೇವೇಗೌಡ ಅವರ ನಿವಾಸಕ್ಕೆ ದೌಡಾಯಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರಾದ ಕೃಷ್ಣ ಭೈರೇಗೌಡ, ಯತೀಂದ್ರ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಚೆಲುವರಾಯಸ್ವಾಮಿ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಚೆನ್ನಮ್ಮ ಅಂತಿಮ ದರ್ಶನ ಪಡೆದು ದೇವೇಗೌಡ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರದ್ಲಾಂಜೆ, ವಿ.ಸೋಮಣ್ಣ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಡಾ.ಅಶ್ವತ್ ನಾರಾಯಣ್ ಸೇರಿದಂತೆ ಇತರ ಪ್ರಮುಖ ನಾಯಕರು ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ