SIR ವಿವಾದದ ನಡುವೆ ಬಂದ ಉಪಚುನಾವಣೆ ಫಲಿತಾಂಶಗಳು, ಚುನಾವಣಾ ಆಯೋಗದ ವಿರುದ್ಧದ ಆರೋಪಗಳಿಗೂ ಮಾಜಿ ನ್ಯಾಯಮೂರ್ತಿಗಳ ತೀಕ್ಷ್ಣ ಪ್ರತಿಕ್ರಿಯೆ

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಅಂತಿಮ ತೀರ್ಪುಗಾರರು. ಚುನಾವಣೆಯಲ್ಲಿ ಮತದಾರರು ನೀಡುವ ತೀರ್ಪನ್ನು ಒಪ್ಪಿಕೊಳ್ಳುವುದು ಪ್ರತಿಯೊಂದು ರಾಜಕೀಯ ಪಕ್ಷದ ಪ್ರಜಾಸತ್ತಾತ್ಮಕ ಜವಾಬ್ದಾರಿ. ಗೆಲುವು ಬಂದಾಗ ಅದನ್ನು ಜನರ ಆಶೀರ್ವಾದ ಎಂದು ಸ್ವೀಕರಿಸುವ ಪಕ್ಷಗಳು, ಸೋಲು ಬಂದಾಗ ಮಾತ್ರ ಚುನಾವಣಾ ವ್ಯವಸ್ಥೆಯನ್ನೇ ಪ್ರಶ್ನಿಸುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ.

ಆದರೆ ಅದೇ ಸಮಯದಲ್ಲಿ, ಚುನಾವಣಾ ಪ್ರಕ್ರಿಯೆಯ ಬಗ್ಗೆ ಅನುಮಾನಗಳಿದ್ದರೆ ಅವುಗಳನ್ನು ಸಾಕ್ಷ್ಯಾಧಾರಗಳೊಂದಿಗೆ ಪ್ರಶ್ನಿಸುವ ಹಕ್ಕು ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ಇದೆ. ಚುನಾವಣಾ ಆಯೋಗವನ್ನು ಟೀಕಿಸುವುದು ಮತ್ತು ಚುನಾವಣಾ ವ್ಯವಸ್ಥೆಯ ವಿರುದ್ಧ ಸಾಬೀತಿಲ್ಲದ ಆರೋಪಗಳನ್ನು ಮಾಡುವುದು—ಇವೆರಡೂ ಒಂದೇ ವಿಷಯವಲ್ಲ.

ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ ಮತ್ತು ಅಸ್ಸಾಂನಲ್ಲಿ ನಡೆದ ಆರು ಉಪಚುನಾವಣೆಗಳ ಫಲಿತಾಂಶಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ. ಅಕ್ಟೋಬರ್ 9ರಂದು ನಡೆದ ಮತ ಎಣಿಕೆಯಲ್ಲಿ ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು, ತಮಿಳುನಾಡಿನ ಧಾರಾಪುರಂ ಮತ್ತು ಮಧುರಾಂತಕಂನಲ್ಲಿ ಟಿವಿಕೆ ಅಭ್ಯರ್ಥಿಗಳು  ಪುದುಚೇರಿಯ ತಟ್ಟಾಂಚಾವಡಿಯಲ್ಲಿ ಎಐಎನ್‌ಆರ್‌ಸಿ ಅಭ್ಯರ್ಥಿ ಅಶೋಕ್ ಆನಂದ್,  ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದಾರೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ದೊಡ್ಡ ಮುನ್ನಡೆ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ಉಪಚುನಾವಣೆಗಳು ವಿಶೇಷ ರಾಜಕೀಯ ಮಹತ್ವ ಪಡೆದಿವೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ನಂದಿಗ್ರಾಮ ಮತ್ತು ಭವಾನಿಪುರ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ಭವಾನಿಪುರ ಕ್ಷೇತ್ರವನ್ನು ಉಳಿಸಿಕೊಂಡು ನಂದಿಗ್ರಾಮವನ್ನು ತೆರವುಗೊಳಿಸಿದ್ದರಿಂದ ಇಲ್ಲಿ ಉಪಚುನಾವಣೆ ನಡೆಯಿತು. ಈ ಉಪಚುನಾವಣೆಯಲ್ಲಿ ಬಿಜೆಪಿಯ ಹಸಿ ರಾಣಿ ರಥ್ ಮತ್ತು ಕಾಂಗ್ರೆಸ್‌ನ ಮಿಲನ್ ಪ್ರಧಾನ ನಡುವೆ ಪ್ರಮುಖ ಸ್ಪರ್ಧೆ ನಡೆಯಿತು. ಮತ ಎಣಿಕೆಯ ಪ್ರಾರಂಭಿಕ ಹಂತಗಳಿಂದಲೇ ಹಸಿ ರಾಣಿ ರಥ್ ಮುನ್ನಡೆ ಕಾಯ್ದುಕೊಳ್ಳುತ್ತಲೇ ಸಾಗಿ ಅಂತಿಮವಾಗಿ ವಿಜಯ ಸಾಧಿಸಿದ್ದಾರೆ

ರೇಜಿನಗರದಲ್ಲಿಯೂ ಬಿಜೆಪಿ ಅಭ್ಯರ್ಥಿ ಶಂಖರಾವ್ ಸರ್ಕಾರ್ ಗೆಲುವು  ಸಾಧಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೊಹಮ್ಮದ್ ಅಬ್ದುಲ್ಲಾಹಿಲ್ ಕಾಫಿ ಸೇರಿದಂತೆ ಹಲವು ಅಭ್ಯರ್ಥಿಗಳು ಕಣದಲ್ಲಿದ್ದರು.  ಸುಮಾರು ಶೇ. 70ರಷ್ಟು ಮುಸ್ಲಿಂ ಮತದಾರರು ಇರುವ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 75,816 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಮಹತ್ವದ ರಾಜಕೀಯ ಮುನ್ನಡೆ ದಾಖಲಿಸುವ ಮೂಲಕ ಬಿಜೆಪಿ ಮುಸ್ಲಿಂ ವಿರೋಧಿ ಎನ್ನುವ ಆರೋಪವನ್ನೂ ಸುಳ್ಳು ಮಾಡಿದೆ ಎನ್ನುವುದೂ ಸಹಾ ಇಲ್ಲಿ ಗಮನಾರ್ಹವಾಗಿದೆ. ಇತ್ತೀಚೆಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ ಈ ಉಪಚುನಾವಣೆಗಳು ಒಂದು ರೀತಿಯ ಮೊದಲ ರಾಜಕೀಯ ಪರೀಕ್ಷೆಯಾಗಿದ್ದು ಅದರಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರ ಗೆಲುವು ಸಾಧಿಸಿದ್ದಾರೆ ಎಂದರೂ ತಪ್ಪಾಗದು

ತಮಿಳುನಾಡಿನಲ್ಲಿ ವಿಜಯ್ ಅವರ ಟಿವಿಕೆಗೆ ಮಹತ್ವದ ಪರೀಕ್ಷೆ

ತಮಿಳುನಾಡಿನ ರಾಜಕೀಯದಲ್ಲಿ ಹೊಸ ಶಕ್ತಿಯಾಗಿ ಹೊರಹೊಮ್ಮಿರುವ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)ಗೆ ಧಾರಾಪುರಂ ಮತ್ತು ಮಧುರಾಂತಕಂ ಉಪಚುನಾವಣೆಗಳು ಅತ್ಯಂತ ಮಹತ್ವದ್ದಾಗಿತ್ತು. 2026ರ ಏಪ್ರಿಲ್ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಗಳಾಗಿ ಗೆದ್ದಿದ್ದ ಪಿ. ಸತ್ಯಭಾಮಾ ಮತ್ತು ಕೆ. ಮರಗತಂ ಕುಮಾರವೇಲ್ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಟಿವಿಕೆಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಈ ಉಪಚುನಾವಣೆಗಳು ನಡೆದವು.  ಅಂದರೆ, ಇದು ಕೇವಲ ಎರಡು ಕ್ಷೇತ್ರಗಳ ಚುನಾವಣೆ ಅಲ್ಲ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ