ಕಳೆದ ಕೆಲವು ವಾರಗಳಿಂದ ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, CBSE ಪರೀಕ್ಷಾ ಅಕ್ರಮಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕುರಿತ ವಿವಾದಗಳು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈ ಸಂಬಂಧಿತವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ತೀವ್ರವಾದ ಆಕ್ರೋಶಗಳಗಳು ವ್ಯಕ್ತವಾಗಿ, ಬಹುತೇಕ ವಿದ್ಯಾರ್ಥಿ ಸಂಘಟನೆಗಳು ಅವರ ರಾಜೀನಾಮೇ ಕೇಳುತ್ತಿದ್ದರೆ, ಬಿಹಾರ್ ರಾಜ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯಂತ ಪ್ರಭಾವಿ ಕೋಚಿಂಗ್ ಸೆಂಟರ್ ಗಳಲ್ಲಿ ಒಂದಾದ ಖಾನ್ ಗ್ಲೋಬಲ್ ಸ್ಟಡೀಸ್ ಮೇಲೆ ಗುಂಡಿನ ಧಾಳಿ ನಡೆದಿದ್ದು ಅದರ ಕುರಿತಾಗಿಯೂ ತನಿಖೆ ನಡೆಯುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿದಾಗ ಸ್ಪರ್ಧಾತ್ಮಕ ಪರೀಕ್ಷೆಗಳು, ಕೋಚಿಂಗ್ ಸೆಂಟರ್ ಮೇಲಿನ ಧಾಳಿ, ಪ್ರಶ್ನೆ ಪತ್ರಿಕೆಗಳ ಸೋರಿಕೆ ಇವೆಲ್ಲವಕ್ಕೂ ಒಂದಕ್ಕೊಂದು ಸಂಬಂಧವಿದ್ದು ಇದರ ಹಿಂದೆ ಬಲು ದೊಡ್ಡ ರಾಜಕೀಯ ಷಡ್ಯಂತ್ರ ಮತ್ತು ಆರ್ಥಿಕ ಆಯಾಮಗಳಿರುವುದು ಕಂಡು ಬರುತ್ತಿದೆ.

ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದಾಗ ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆಗಳು ಮತ್ತು ವ್ಯವಸ್ಥೆಯಲ್ಲಿರುವ ದೋಷಗಳ ಕುರಿತು ಪ್ರಶ್ನಿಸುವುದು ಹಾಗೂ ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರುವುದು ಖಂಡಿತವಾಗಿಯೂ ಅಗತ್ಯ. ಆದರೆ ಅಂತಹ ಘಟನೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಅಥವಾ ದ್ವೇಷದ ವಾತಾವರಣ ಸೃಷ್ಟಿಸುವುದು ಯಾವುದೇ ರೀತಿಯಲ್ಲೂ ಸಮರ್ಥನೀಯವಲ್ಲ.

ಇಂದಿನ ಪರಿಸ್ಥಿತಿಯಲ್ಲಿ ನಾವು ಕೇವಲ ಪರೀಕ್ಷಾ ಅಕ್ರಮಗಳ ಬಗ್ಗೆ ಮಾತ್ರವಲ್ಲ, ನಮ್ಮ ಶಿಕ್ಷಣ ವ್ಯವಸ್ಥೆಯ ಮೂಲ ಉದ್ದೇಶದ ಬಗ್ಗೆಯೂ ಗಂಭೀರವಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಶಿಕ್ಷಣವೆಂದರೆ ಕೇವಲ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸುವ ಸಾಧನವಾಗಿರದೆ, ವಿದ್ಯಾರ್ಥಿಯ ಸರ್ವಾಂಗೀಣ ವ್ಯಕ್ತಿತ್ವ ವಿಕಾಸಕ್ಕೆ ಭದ್ರ ಅಡಿಪಾಯವಾಗಬೇಕು. ಅದು ಚಿಂತನಶೀಲತೆ, ತಾರ್ಕಿಕತೆ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ, ಜೀವನ ಕೌಶಲ್ಯಗಳು ಮತ್ತು ಉತ್ತಮ ಮೌಲ್ಯಗಳನ್ನು ಬೆಳೆಸುವ ಪ್ರಕ್ರಿಯೆಯಾಗಿರಬೇಕು. ಪರೀಕ್ಷೆಗಳು ಈ ಜ್ಞಾನ ಮತ್ತು ಕೌಶಲ್ಯಗಳನ್ನು ಅಳೆಯುವ ಒಂದು ಸಾಧನವಾಗಿರಬೇಕು ಹೊರತು ಶಿಕ್ಷಣದ ಅಂತಿಮ ಗುರಿಯಾಗಬಾರದು.

ಒಬ್ಬ ವಿದ್ಯಾರ್ಥಿಯ ಯಶಸ್ಸನ್ನು ಕೇವಲ ಅಂಕಗಳ ಆಧಾರದ ಮೇಲೆ ನಿರ್ಧರಿಸದೆ, ಅವನ ವೈಯಕ್ತಿಕ ಗುರಿಗಳು, ಆಸಕ್ತಿಗಳು ಮತ್ತು ಜೀವನದಲ್ಲಿ ಸಾಧಿಸಿರುವ ಪ್ರಗತಿಯ ಆಧಾರದ ಮೇಲೆ ಮೌಲ್ಯಮಾಪನ ಮಾಡಬೇಕಾಗಿದೆ. ಅದಕ್ಕಾಗಿಯೇ ಹಿರಿಯರು “ಸಾಧನೆಗೆ ಮುಂದೆ ಗುರಿ ಮತ್ತು ಹಿಂದೆ ಗುರು ಇರಬೇಕು” ಎಂದು ಹೇಳಿರುವುದು ಅತ್ಯಂತ ಅರ್ಥಪೂರ್ಣವಾಗಿದೆ.

ದುರದೃಷ್ಟವಶಾತ್, ಇಂದಿನ ಶಿಕ್ಷಣ ವ್ಯವಸ್ಥೆ ಇನ್ನೂ ಬಹುಮಟ್ಟಿಗೆ ಬ್ರಿಟಿಷರ ಮೆಕಾಲೆ ಶಿಕ್ಷಣ ಮಾದರಿಯ ಪ್ರಭಾವದಲ್ಲೇ ಉಳಿದಿದ್ದು, ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ವಿಶ್ಲೇಷಣಾತ್ಮಕ ಚಿಂತನೆ, ಭಾವನಾತ್ಮಕ ಪ್ರಬುದ್ಧತೆ, ವೃತ್ತಿಪರ ಕೌಶಲ್ಯಗಳು, ಸಾಮಾಜಿಕ ಹೊಣೆಗಾರಿಕೆ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಬದಲು, ಪಾಠಗಳನ್ನು ಕಂಠಪಾಠ ಮಾಡಿ ಪರೀಕ್ಷೆಯಲ್ಲಿ ಪುನರಾವರ್ತಿಸುವ ಸಂಸ್ಕೃತಿಯನ್ನು ಉತ್ತೇಜಿಸುತ್ತಿದೆ. ಇದರ ಪರಿಣಾಮವಾಗಿ ಶಿಕ್ಷಣದ ನಿಜವಾದ ಉದ್ದೇಶ ಮರೆಯಾಗುತ್ತಿದ್ದು, ಅಂಕಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳೇ ಶಿಕ್ಷಣದ ಕೇಂದ್ರಬಿಂದುವಾಗಿ ಪರಿಣಮಿಸಿವೆಇದೇ ಇಂದಿನ ಅನೇಕ ಸಮಸ್ಯೆಗಳ ಮೂಲ ಕಾರಣವೆಂದರೂ ತಪ್ಪಾಗದು..

ಒಂದು ಕಾಲದಲ್ಲಿ ಶಾಲೆಗಳಲ್ಲಿ ಶಿಕ್ಷಕರು ಎಲ್ಲ ವಿದ್ಯಾರ್ಥಿಗಳಿಗೆ ಒಟ್ಟಾಗಿ ಪಾಠ ಬೋಧಿಸುತ್ತಿದ್ದಾಗ, ಕೆಲ ವಿದ್ಯಾರ್ಥಿಗಳಿಗೆ ವಿಷಯಗಳು ಸಂಪೂರ್ಣವಾಗಿ ಅರ್ಥವಾಗದ ಕಾರಣ ಪೋಷಕರು ವೈಯಕ್ತಿಕವಾಗಿ ಮನೆಪಾಠ ಅಥವಾ ಖಾಸಗಿ ಬೋಧನೆಯ ವ್ಯವಸ್ಥೆ ಮಾಡುತ್ತಿದ್ದರು. ಕಾಲಕ್ರಮೇಣ ಈ ವ್ಯವಸ್ಥೆಯೇ ವಾಣಿಜ್ಯೀಕರಣಗೊಂಡು, ಇಂದು ಬಹುಬಿಲಿಯನ್ ರೂಪಾಯಿಗಳ ಕೋಚಿಂಗ್ ಉದ್ಯಮವಾಗಿ ಬೆಳೆಯಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸುವ ಒತ್ತಡ ಮತ್ತು ಉತ್ತಮ ಶ್ರೇಯಾಂಕ ಪಡೆಯುವ ಪೈಪೋಟಿಯೇ ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಪರಿಣಾಮವಾಗಿ ದೇಶದಾದ್ಯಂತ ನಾಯಿಕೊಡೆಗಳಂತೆ ಕೋಚಿಂಗ್ ಕೇಂದ್ರಗಳು ತಲೆ ಎತ್ತಿದ್ದು, ಶಿಕ್ಷಣವು ಜ್ಞಾನಾರ್ಜನೆಯ ಪ್ರಕ್ರಿಯೆಯಾಗಿರದೆ, ಅಂಕಗಳ ಸ್ಪರ್ಧೆಯಾಗಿ ರೂಪಾಂತರಗೊಂಡಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ..

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ