ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಆದೇಶ ಮರುಪರಿಶೀಲಿಸಲು ನಿರಾಕರಿಸಿದೆ.
ಹೈಕೋರ್ಟ್‌ ಆದೇಶದ ಮರುಪರಿಶೀಲನೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಸಂಬಂಧ ಕೆಲವು ಮಾರ್ಪಾಡು ಮಾಡಿ ನ್ಯಾಯಮೂರ್ತಿ ಇ.ಎಸ್‌. ಇಂದಿರೇಶ ಅವರ ಏಕಸದಸ್ಯ ಪೀಠ  ಇತ್ಯರ್ಥಗೊಳಿಸಿದೆ.
ಪರೀಕ್ಷೆಗಳ ಪ್ರಕಟಣೆಗೂ ಮುನ್ನ ಜಾರಿಯಲ್ಲಿದ್ದ ನಿಯಮಾವಳಿಗಳ ಪ್ರಕಾರ ಮೌಲ್ಯಮಾಪನ ವ್ಯವಸ್ಥೆಯನ್ನು ಮುಂದುವರಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಈ ವರ್ಷ ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಹೈಕೋರ್ಟ್ ಆದೇಶಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ