ಕೊರೊನಾಗೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಗಿದೆ.ಮುಖ್ಯಮಂತ್ರಿಗಳೊಂದಿಗೆ ಅಧಿಕಾರಿಗಳು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಶರಣ್​ ಪ್ರಕಾಶ್ ಪಾಟೀಲ್​, ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲದಿದ್ದರೂ, ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿದಂತೆ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ. ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಯಿತು ಎಂದಿದ್ದಾರೆ.ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಒಳ್ಳೆಯದು. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಎಂಬ ಎಚ್ಚರಿಕೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ಸರ್ವ ಸನ್ನದ್ಧವಾಗಿರುವಂತೆ ಸಿಎಂ ಸೂಚನೆ

ಆರೋಗ್ಯ ಇಲಾಖೆ  ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ  ಮುಖ್ಯಮಂತ್ರಿಗಳು ಮಾಹಿತಿ ಪಡೆದರು.ಕಳೆದ ಜನವರಿಯಿಂದಲೂ ಕೊರೊನಾ  ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಂಡುಬರುತ್ತಿದ್ದು, ಮೇನಲ್ಲಿ ಉಲ್ಬಣವಾಗಿದ್ದು  ಮೇ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ  ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ

ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮಕ್ಕಳಿಗೆ ಜ್ವರ ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದರೆ ಶಾಲೆಗೆ ಕಳಿಸದಂತೆ  ಪೋಷಕರು ಕ್ರಮ ವಹಿಸಲು, ಶಾಲಾ ಕಾಲೇಜು ಮಂಡಳಿಗಳು ನಿಗಾ ವಹಿಸಲು ಸೂಚಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ, ಎಂತಹುದೇ ಪರಿಸ್ಥಿತಿ ಎದುರಿಸಲು,  ಆಸ್ಪತ್ರೆಗಳಲ್ಲಿ  ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ಕ್ರಮ ತೆಗೆದುಕೊಳ್ಳಬೇಕು.

ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭಿಸಬೇಕು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ