ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ಈಗ ಕರ್ನಾಟಕದಲ್ಲಿಯೂ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಜಗತ್ತನ್ನೇ ನಡುಗಿಸಿದ್ದ ವೈರಸ್ ರೂಪಾಂತರದ ಭೀತಿ ಇದೀಗ ಮತ್ತೆ ಮುಂಚೂಣಿಗೆ ಬಂದಿದೆ. ಆಂಧ್ರಪ್ರದೇಶದ ಪರಿಸ್ಥಿತಿಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ನಡುವೆಯೇ, ಕರ್ನಾಟಕದಲ್ಲೂ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿರುವುದು ವರದಿಯಾಗಿದೆ. ಜೂನ್​ನಲ್ಲಿ ೧೪ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಆದರೆ ಜುಲೈನಲ್ಲಿ ಕೇವಲ ಹತ್ತು ದಿನಗಳಲ್ಲೇ ಈ ಸಂಖ್ಯೆ 32ಕ್ಕೆ ತಲುಪಿದೆ. ಒಟ್ಟು 193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಈ 32 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಆರೋಗ್ಯ ಇಲಾಖೆ ಆಯುಕ್ತರಾದ ಗುರುದತ್ ಹೆಗಡೆ, ಆಂಧ್ರಪ್ರದೇಶದ ಕಡಪಾದಲ್ಲಿ ಸಂಭವಿಸಿರುವ ಸಾವುಗಳು ಸದ್ಯಕ್ಕೆ ಶಂಕಿತ ಪ್ರಕರಣಗಳಾಗಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರದೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸದ್ಯ ಪತ್ತೆಯಾಗಿರುವ ಪ್ರಕರಣಗಳು ಅಷ್ಟೊಂದು ಗಂಭೀರ ಸ್ವರೂಪದ್ದಲ್ಲ. ಶಸ್ತ್ರಚಿಕಿತ್ಸೆಗೆ ಮುನ್ನ ನಡೆಸಲಾಗುವ ಕಡ್ಡಾಯ ತಪಾಸಣೆಯ ಸಂದರ್ಭದಲ್ಲಿ ಯಾವುದೇ ರೋಗಲಕ್ಷಣಗಳಿಲ್ಲದ ಈ ಸೋಂಕು ಪತ್ತೆಯಾಗುತ್ತಿದೆ. ಆರೋಗ್ಯ ಇಲಾಖೆಯು ಪ್ರತಿದಿನದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಯಾರೂ ಅನಗತ್ಯವಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ