ಬೆಂಗಳೂರಿನ ಆರ್.ಆರ್. ನಗರ ಸಮೀಪದ ಪಟ್ಟಣಗೆರೆ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಬ್ಲು, ಲಕ್ಷ್ಮಮ್ಮ,  9 ವರ್ಷದ ಬಾಲಕ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಕಟ್ಟಡದ ಚಾವಣಿಗೆ ಅಳವಡಿಸಿದ್ದ ಸಿಮೆಂಟ್ ಶೀಟ್‌ಗಳು ಛಿದ್ರಗೊಂಡಿವೆ.

ಬಿಹಾರ ಮೂಲದ ಬಬ್ಲು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಪಾನಿಪುರಿ ವ್ಯಾಪಾರ ನಡೆಸುತ್ತಿದ್ದರು. ವ್ಯಾಪಾರಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸಂಗ್ರಹಿಸಿಡಲು ಪಟ್ಟಣಗೆರೆ ಸಮೀಪ ಗೋಡೌನ್‌ವೊಂದನ್ನು ಬಳಸುತ್ತಿದ್ದರು ಎನ್ನಲಾಗಿದೆ.

ಗೋಡೌನ್‌ನಲ್ಲಿ ರಾತ್ರಿ ವೇಳೆ ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿದ್ದು, ಒಳಭಾಗದಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗಿದೆ. ಇದರಿಂದ ಒಳಗಡೆ ಅನಿಲ ಸಂಗ್ರಹವಾಗಿರುವ ಸಾಧ್ಯತೆ ಇದೆ. ಬೆಳಗ್ಗೆ ಬಬ್ಲು ಅವರು ಗೋಡೌನ್‌ನ ಬಾಗಿಲು ತೆರೆದ ಸಂದರ್ಭದಲ್ಲಿ ಏಕಾಏಕಿ ಬೆಂಕಿ ಹೊರಚಿಮ್ಮಿ ಸ್ಫೋಟ ಸಂಭವಿಸಿದೆ ಎಂದು ಎನ್ನಲಾಗಿದೆ.  ಆದರೆ ಸ್ಫೋಟಕ್ಕೆ ನಿಖರವಾದ ಕಾರಣ ಅಧಿಕೃತವಾಗಿ ದೃಢಪಟ್ಟಿಲ್ಲ

ಈ ಘಟನೆಯಲ್ಲಿ ಬಬ್ಲು, ಪಕ್ಕದ ಮನೆಯ ನಿವಾಸಿ ಲಕ್ಷ್ಮಮ್ಮ ಮತ್ತು 9 ವರ್ಷದ ಬಾಲಕ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಪೊಲೀಸರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಿನ ಸಮಯದಲ್ಲಿ ಸಂಭವಿಸಿದ ಈ ಅವಘಡದಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

ಛಿದ್ರಗೊಂಡ ಸಿಮೆಂಟ್ ಶೀಟ್‌ಗಳು: ಗ್ಯಾಸ್ ಸಿಲಿಂಡರ್ ಸ್ಫೋಟದ ತೀವ್ರತೆಗೆ ಗೋಡೌನ್‌ನ ಮೇಲ್ಛಾವಣಿಗೆ ಹಾಕಲಾಗಿದ್ದ ಸಿಮೆಂಟ್ ಶೀಟ್‌ಗಳು ಛಿದ್ರಗೊಂಡಿವೆ. ಸ್ಫೋಟದಿಂದ ಕಟ್ಟಡದ ಒಳಭಾಗದಲ್ಲಿಯೂ ಹಾನಿಯಾಗಿದೆ.

ಘಟನೆ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಆರ್.ಆರ್. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ