ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಚೆನ್ನಾಗಿ ಆಡಬೇಕೆಂದು ಎಂದು ಶುಭ ಕೋರಿದ ಸಿಎಂ, ಸೋಲು ಗೆಲುವುಗಳಿಗಿಂತ ಕ್ರೀಡಾ ಮನೋಭಾವ ಮುಖ್ಯ ಎಂದು ಹೇಳಿದರು.

ಚಾಮುಂಡಿ ವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಮೆಚ್ವುಗೆ ವ್ಯಕ್ತಪಡಿಸಿದರು.

ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ. ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾ ಮೀಸಲಾತಿಯನ್ನು ನೀಡಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ