415 ನೇ ಶ್ರೀರಂಗಪಟ್ಟಣ ದಸರಾ ಉದ್ಘಾಟನೆಯನ್ನು ಖ್ಯಾತ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ ಟಿ.ಎಸ್  ನಾಗಾಭರಣ ಅವರಿಂದ  ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಇಂದು ( ಸೆ.25) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ 415 ನೇ ಶ್ರೀರಂಗಪಟ್ಟಣದಲ್ಲಿ ದಸಾರಾ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.ಕಣ್ಮನ ಸೆಳೆದ ಮೆರವಣಿಗೆ: 415 ನೇ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಆಯೋಜಿಸಿದ್ದ ಪೂಜಾಕುಣಿತ, ತಮಟೆ, ನಗಾರಿ, ಪಟ್ಟಕುಣಿತ, ಹುಲಿವೇಷ,ವೀರಗಾಸೆ, ವೀರ ಭದ್ರಕುಣಿತ, ಕಾಳಿ ಕುಣಿತ, ಕಂಸಾಳೆ,ವೀರ ಮಕ್ಕಳ ಕುಣಿತ, ಓನಕೆ ಕುಣಿತ, ಕೋಲಾಟ, ಗೊಂಬೆ ಕುಣಿತ, ಡೊಳ್ಳು ಕುಣಿತ, ಬೆಂಕಿ ಭರಾಟೆ, ದೊಣ್ಣೆ ವರಸೆ, ಸೋಮನ ಕುಣಿತ, ಬೇಡರ ವೇಷ, ಹಾಲಕ್ಕಿ ಸುಗ್ಗಿ ಕುಣಿತ, ಗಾರುಡಿಗೊಂಬೆ, ಚಿಲಿಪಿಲಿ ಗೊಂಬೆ, ನಾಸಿಕ್ ಡೊಲಾಟಗಳು ನೋಡುಗರ ಗಮನ ಸೆಳೆದವು.

ಸ್ತಬ್ಧ ಚಿತ್ರಗಳು: ತೋಟಗಾರಿಕೆ ಇಲಾಖೆಯ ಸ್ತಬ್ಧ ಚಿತ್ರಗಳು, ಕೃಷಿ ಇಲಾಖೆಯ ಸ್ತಬ್ಧಚಿತ್ರ, ಭಾರತೀಯ ಬೌದ್ಧ ಮಹಾಸಭಾ, ಕೃಷಿ ಇಲಾಖೆಯ ಸ್ತಬ್ಧಚಿತ್ರ, ಶಿಕ್ಷಣ ಇಲಾಖೆಯ ಸ್ತಬ್ಧ ಚಿತ್ರ, ರೇಷ್ಮೆ ಇಲಾಖೆಯ ಸ್ತಬ್ಧ ಚಿತ್ರ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಸ್ತಬ್ಧ ಚಿತ್ರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ಮಾರಾಟ ನಿಷೇಧ ಮತ್ತು ಅಪರಾಧ, ಅರಣ್ಯ ಇಲಾಖೆಯ ಸ್ತಬ್ಧ ಚಿತ್ರಗಳು ಮನಸೆಳೆದವು.ನಾಡದೇವತೆ ಚಾಮುಂಡೇಶ್ವರಿ ಹೊತ್ತ ಅಂಬಾರಿಗೆ ಪೊಲೀಸ್ ಬ್ಯಾಂಡ್ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು.

ಶ್ರೀರಂಗಪಟ್ಟಣ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿ ಕುಮಾರ್, ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿ ಸಿದ್ದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ, ಶ್ರೀನಿವಾಸ್, ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನ ಯಾದವ್ ಉಪಸ್ಥಿತರಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ