ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಅವರ ಮೊಬೈಲ್‌ಗಳು ಸ್ವಿಚ್‌ಆಫ್ ಆಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.

ದಾವಣಗೆರೆಯ ಬನಶಂಕರಿ ಬಡಾವಣೆ ನಿವಾಸಿ ರಮೇಶ್ ಕುಮಾರ್(38) ಆಗಸ್ಟ್ 14 ರಂದು ತಮ್ಮ ಪತ್ನಿ ಜಯಶೀಲ (36), ಪುತ್ರ ಹಿತೇಶ್(9) ಹಾಗೂ ಪುತ್ರಿ ಪ್ರೇರಣ(3) ಅವರೊಂದಿಗೆ ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಪೋಷಕರಿಗೆ ಹೇಳಿ ಮನೆಯಿಂದ ಹೊರಟಿದ್ದು, ಹಿಂದಿರುಗಿ ಬಂದಿಲ್ಲ ಮತ್ತು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ.

ಮೂಲತಃ ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದ ರಮೇಶ್ ಕುಮಾರ್ ಅವರು ಷೇರು ಮಾರುಕಟ್ಟೆ ಹೂಡಿಕೆ ವ್ಯವಹಾರ ಮಾಡಿಕೊಂಡು ಕುಟುಂಬದೊಂದಿಗೆ ದಾವಣಗೆರೆಯಲ್ಲಿ ನೆಲೆಸಿದ್ದರು. ಸಾರ್ವಜನಿಕರಿಂದಲೂ ಹಣ ಸಂಗ್ರಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟವಾಗಿತ್ತು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಕುಟುಂಬ ಸಮೇತ ಮನೆ ಬಿಟ್ಟು ಹೋಗಿರಬಹುದೇ ಎಂಬ ಅನುಮಾನವೂ ವ್ಯಕ್ತವಾಗಿದೆ.

ರಮೇಶ್ ಕುಟುಂಬ ತಮ್ಮ ಸ್ವಂತ ಕಾರು ಅಥವಾ ಬೈಕ್ ಬಳಸದೆ, ಅವುಗಳನ್ನು ಮನೆಯ ಬಳಿಯೇ ನಿಲ್ಲಿಸಿ, ಆಟೋದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಹೋಗಿದ್ದರು. ಬಳಿಕ ರಮೇಶ್ ಕುಮಾರ್​ ಮೊಬೈಲ್ ಸ್ವಿಚ್​ ಆಫ್​ ಮಾಡಿಕೊಂಡಿದ್ದು, ಅಂದಿನಿಂದ ಈವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಸಂಬಂಧಿಕರ ಮನೆಗಳಿಗೂ ಹೋಗಿಲ್ಲ. ಇದರಿಂದ ಆತಂಕಗೊಂಡು ರಮೇಶ್​​ ಕುಮಾರ್​ ಅವರ ಸಂಬಂಧಿಕರು ವಿದ್ಯಾನಗರ ಠಾಣೆಗೆ ದೂರು ನೀಡಿದ್ದು, ರಮೇಶ್ ಕುಟುಂಬಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮನೆಯಲ್ಲಿ ಪತ್ರ ಪತ್ತೆ

ನಾವು ಬಹಳ ಸಾಲ ಮಾಡಿಕೊಡಿದ್ದೇವೆ, ಆದರೆ ಯಾರಿಗೂ ಅನ್ಯಾಯ ಮಾಡಿಲ್ಲ. ಸಾಲ ತಿರಿಸಲು ಆಗದ ಕಾರಣ ನಾವು ದೂರ ಹೋಗುತ್ತಿದ್ದೇವೆ. ನಮ್ಮನ್ನು ಹುಡುಕ ಬೇಡಿ, ನಮ್ಮಿಂದ ಸಂಬಂಧಿಕರ ಹೆಸರು ಹಾಳಾಗಬಾರದು. ಹೀಗಾಗಿ ದೂರ ಹೋಗುತ್ತಿದ್ದೇವೆ ಎಂದು ಮನೆಯಲ್ಲಿ ಬರೆದಿಟ್ಟು ಹೋದ ಪತ್ರ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ