ಬೆಂಗಳೂರು ಹೊರವಲಯದ ಬಳಿ ಭೀಕರ ಅಪಘಾತ ಸಂಭವಿಸಿದ್ದು,  ಪಂಚರ್ ಆಗಿ ನಿಂತಿದ್ದ ಕ್ಯಾಂಟರ್​ಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಮಂದಿ ಮೃತಪಟ್ಟಿದ್ದಾರೆ.

ಅತೀ ವೇಗದಲ್ಲಿ ಸಾಗುತ್ತಿದ್ದ ಟಾಟಾ ಏಸ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಟಾಟಾ ಏಸ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಡಿಕ್ಕಿ ರಭಸಕ್ಕೆ ಚಾಲಕ ಹಾಗೂ ಸಹಾಯಕ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾರೆ.

ಕೆ.ಆರ್ ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಈ ಅಪಘಾತ ನಡೆದಿದೆ. ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬಂದಿದ್ದ ಕ್ಯಾಂಟರ್ ವಾಹನ, ಪಂಚರ್ ಆಗಿ ಮೇಡಹಳ್ಳಿ ಮೇಲ್ಸೇತುವೆ ಮೇಲೆ ನಿಂತಿದೆ. ಆಗ ಕ್ಯಾಂಟರ್ ಚಾಲಕ ವಾಹನದ ಟೈಯರ್ ಬದಲಾಯಿಸಲು ಮುಂದಾಗಿದ್ದಾನೆ. ನಿಂತಿರುವ ಕ್ಯಾಂಟರ್ ಗಮನಿಸದೇ ಅತೀ ವೇಗವಾಗಿ ಸಾಗುತ್ತಿದ್ದ KA 53 AB 3498 ಟಾಟಾ ಏಸ್ ವಾಹನ ಭೀಕರವಾಗಿ ಅಪಘಾತಕ್ಕೀಡಾಗಿದೆ. ಡಿಕ್ಕಿ ರಭಸಕ್ಕೆ ಇಬ್ಬರ ದೇಹಗಳು ಸಿಲುಕಿ ಛಿದ್ರ‌ಗೊಂಡಿವೆ.

ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದ. ಇಬ್ಬರ ಮೃತದೇಹಗಳನ್ನು ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಸುಮಾರು 25-30 ವಯಸ್ಸಿನ ವೈಟ್‌ಫೀಲ್ಡ್ ನಿವಾಸಿಗಳಾದ ಮಣಿಕಂಠ, ಸುರೇಶ್, ಶ್ರೀನಿವಾಸ್ ಮೃತಪಟ್ಟವರು ಎನ್ನಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ