ದಿಲ್ಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ 10 ಲಕ್ಷ ರೂ. ಪರಿಹಾರವನ್ನು ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಿಸಿದ್ದಾರೆ.

ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ 5 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ದೆಹಲಿಯಲ್ಲಿ ನಡೆದ ದುರದೃಷ್ಟಕರ ಘಟನೆಯು ಇಡೀ ನಗರಕ್ಕೆ  ಆಘಾತವನ್ನುಂಟು ಮಾಡಿದೆ. ಈ ಸಂಕಷ್ಟದ ಸಮಯದಲ್ಲಿ ದಿಲ್ಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದಾರೆ.

ದಿಲ್ಲಿ ಸರ್ಕಾರ ಪ್ರತಿ ಸಂತ್ರಸ್ತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ಪರಿಹಾರಕ್ಕಾಗಿ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ