ದಿಲ್ಲಿಯಲ್ಲಿ ನಡೆದ ಬಾಂಬ್​ ಸ್ಫೋಟಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಯಾವುದೇ ಕಾರಣಕ್ಕೂ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು  ಹೇಳಿದ್ದಾರೆ.

ಭೂತಾನ್​ನಲ್ಲಿ ಮಾತನಾಡಿರುವ ಮೋದಿ, ಇಂದು ನನ್ನ ಎದೆ ತುಂಬಾ ಭಾರವಾಗಿದೆ. ಆದರೂ, ಅದೇ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದಿಲ್ಲಿಯಲ್ಲಿ ನಡೆದ ಭೀಕರ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಇದು ಖಂಡನೀಯ. ತನ್ನವರನ್ನು ಕಳೆದುಕೊಂಡ ಕುಟುಂಬಸ್ಥರ ನೋವು ನನಗೆ ಅರ್ಥವಾಗುತ್ತದೆ ಎಂದರು.

ಇಡೀ ಭಾರತವೇ ಸಂತ್ರಸ್ತ ಕುಟುಂಬಗಳ ಜೊತೆ ನಿಂತಿದೆ. ಈ ಘಟನೆ ಹಿಂದೆ ಯಾರಿದ್ದರೂ ಸಹ ಬಿಡುವ ಮಾತೇ ಇಲ್ಲ. ದಿಲ್ಲಿ ಸ್ಫೋಟದಲ್ಲಿ ಪ್ರಾಣ ಬಿಟ್ಟವರಿಗೆ ನ್ಯಾಯ ಕೊಡಿಸುವುದು ನಮ್ಮ ಗುರಿ ಎಂದಿದ್ದಾರೆ.

ಮಾಹಿತಿ ಪ್ರಕಾರ ಮೃತರ ಸಂಖ್ಯೆ 13ಕ್ಕೇರಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ