ದಿಲ್ಲಿ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ನಡೆದ ಕಾರು ಸ್ಫೋಟ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಮಾತ್ರವಲ್ಲ, ಈ ಘಟನೆ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಿ ಕೇಂದ್ರ ಆದೇಶಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕೇಸ್​​ ಎನ್​ಐಎಗೆ ಹಸ್ತಾಂತರಗೊಂಡಿದ್ದು, ತನಿಖೆ ಚುರುಕುಗೊಂಡಿದೆ.

ಎನ್​ಐಎ ತಂಡ ಕೆಂಪು ಕೋಟೆ ಬಳಿಯ ಸ್ಥಳಕ್ಕೆ ತಲುಪಿ ಸಮಗ್ರ ಶೋಧ ಕಾರ್ಯಾಚರಣೆ ಆರಂಭಿಸಿದೆ. ಈಗಾಗಲೇ ಪ್ರಕರಣ​ ಸಂಬಂಧ ಹಲವು ಪುರಾವೆಗಳನ್ನು ಸಂಗ್ರಹಿಸಿದ್ದು, ಶಂಕಿತರನ್ನು ಪತ್ತೆಹಚ್ಚಲಾಗಿದೆ.

ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಈ ಭೀಕರ ಸ್ಫೋಟದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ