ರಾಷ್ಟ್ರ ರಾಜಧಾನಿ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಶಾರದಾ ಕಾಲೊನಿಯ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕಟ್ಟಡದ ಎರಡನೇ ಮಹಡಿಯಲ್ಲಿ ಭಾನುವಾರ ನಸುಕಿನ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. 14 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದವು. ಸಿಬ್ಬಂದಿ ಸ್ಥಳಕ್ಕೆ ತಲುಪಿದಾಗ, ಬೆಂಕಿ ಕಟ್ಟಡದ ಮೂರನೇ ಮತ್ತು ನಾಲ್ಕನೇ ಮಹಡಿಗೆ ವ್ಯಾಪಕವಾಗಿ ಹರಡಿತ್ತು.

ಶಿಖಾ ಜೈನ್​, ಅರವಿಂದ್​, ಅನಿತಾ ಜೈನ್​, ನಿಶಾಂತ್​ ಜೈನ್​, ಅಂಚಲ್​ ಜೈನ್​, ನವೀನ್​ ಜೈನ್​, ಶೈಲಿ ಜೈನ್​, ಸಂಯಕ್​ ಜೈನ್​ ಹಾಗೂ ಒಂದೂವರೆ ವರ್ಷದ ಮಗು ಮೃತಪಟ್ಟಿದ್ದಾರೆ.

ವಿವೇಕ್ ವಿಹಾರ್ ಪೂರ್ವ ದೆಹಲಿಯ ಒಂದು ಪ್ರಮುಖ ಸ್ಥಳವಾಗಿದ್ದು, ಕಟ್ಟಡದಿಂದ ಹಲವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ನಂತರ ಬೆಳಗ್ಗೆ 6 ಗಂಟೆಯ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಕಟ್ಟಡದ ಹಲವು ಭಾಗಗಳು ಸುಟ್ಟುಹೋಗಿ, ಮೇಲಿನ ಮಹಡಿಯಿಂದ ಹೊಗೆ ಹೊರಬರುತ್ತಿತ್ತು. ಎಲ್ಲಾ ಶವಗಳನ್ನು ವಶಪಡಿಸಿಕೊಂಡು ದೆಹಲಿ ಪೊಲೀಸ್ ಅಪರಾಧ ತಂಡಕ್ಕೆ ಹಸ್ತಾಂತರಿಸಿದ್ದಾರೆ.

ಎಸಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ನಿವಾಸಿಯೊಬ್ಬರು ಹೇಳಿದ್ದಾರೆ. ಎಸಿಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 12-15 ಜನರನ್ನು ರಕ್ಷಿಸಲಾಗಿದೆ. ಆದಾಗ್ಯೂ, 4-5 ಜನರು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ