ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅವರೊಂದಿಗೆ 13 ಪ್ರಭಾವಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಡಿಕೆಶಿ ಪ್ರಮಾಣ ವಚನಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ವೇದಿಕೆಯಲ್ಲಿ 20 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ ಸೇರಿದಂತೆ ಸರ್ವಧರ್ಮಗಳ 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ. ಅವರ ಸಮ್ಮುಖದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಗಾಂಧಿ, ವೇಣುಗೋಪಾಲ್, ಸುರ್ಜೇವಾಲಾ ಸೇರಿದಂತೆ ಹಲವು ಗಣ್ಯರಿಗೆ ಪ್ರಮಾಣವಚನಕ್ಕೆ ಆಹ್ವಾನಿಸಲಾಗಿದೆ. ಕೇರಳ ಸಿಎಂ ಸತೀಶನ್ ಈಗಾಗಲೇ ಬೆಂಗಳೂರಿಗೆ ಬಂದಿದ್ದಾರೆ.

ಡಿ.ಕೆ. ಶಿವಕುಮಾರ್ ಜೊತೆ 13 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಮಂಗಳವಾರ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ್ದ ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜೇವಾಲ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸಚಿವರ ಪಟ್ಟಿಯನ್ನು ಫೈನಲ್ ಮಾಡಿದ್ದಾರೆ.

ಸಂಜೆ ಎಐಸಿಸಿ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ನಿವಾಸದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿದ್ದ ಕಾಂಗ್ರೆಸ್​ ನಾಯಕರು ಪಟ್ಟಿ ಅಂತಿಮಗೊಳಿಸಿದ್ದಾರೆ. ಹೈಕಮಾಂಡ್ ಭೇಟಿ ಬಳಿಕ ಬೆಂಗಳೂರಿಗೆ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಒಟ್ಟಿಗೆ ಆಗಮಿಸುತ್ತಿದ್ದು, ಇಂದು ಬಹುತೇಕ 13 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಚಿವರ ಪಟ್ಟಿ : ಡಾ. ಜಿ. ಪರಮೇಶ್ವರ್, ಯು.ಟಿ. ಖಾದರ್, ರಾಮಲಿಂಗಾರೆಡ್ಡಿ,  ಕೆ.ಜೆ.ಜಾರ್ಜ್,  ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಕೃಷ್ಣಬೈರೇಗೌಡ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಕೆ.ಎಚ್.ಮುನಿಯಪ್ಪ, ಈಶ್ವರ್ ಖಂಡ್ರೆ,   ಶರಣಪ್ರಕಾಶ್ ಪಾಟೀಲ್  ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ