ಉಗಾಂಡಾದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಂಡಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ಗೆ ದಾಖಲಿಸಿ ಕಟ್ಟುನಿಟ್ಟಿನ ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ.

ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಆಕೆಯನ್ನು ತಕ್ಷಣವೇ ಐಸೋಲೇಷನ್ ನಲ್ಲಿ ಇರಿಸಲಾಗಿದ್ದು, ಸೋಂಕು ದೃಢೀಕರಣಕ್ಕಾಗಿ ರಕ್ತದ ಮಾದರಿಗಳನ್ನು ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ವರದಿ ಬರುವವರೆಗೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿ ಮಹಿಳೆಯ ಸಂಪರ್ಕಕ್ಕೆ ಬಂದವರ ಮೇಲೂ ನಿಗಾ ಇಟ್ಟಿದೆ.

ಮಹಿಳೆಯನ್ನು ಉಗಾಂಡಾದ ರಾಜಧಾನಿ ಕ್ಯಾಂಪಾಲಾ ನಿವಾಸಿ ನಗಿರೆ ಲತೀಫಾ ಎನ್ನಲಾಗಿದ್ದು, ಅವರು ಮೇ 23ರಂದು ಬೆಂಗಳೂರಿಗೆ ಆಗಮಿಸಿ ನಗರದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು ಎನ್ನಲಾಗಿದೆ.

ಮಹಿಳೆಯಲ್ಲಿ ಎಬೋಲಾ ಸೋಂಕಿಗೆ ಸಂಬಂಧಿಸಿದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಅವರನ್ನು ಆಂಬ್ಯುಲೆನ್ಸ್ ಮೂಲಕ ನಗರದ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಪ್ರಸ್ತುತ ಅವರನ್ನು ಪ್ರತ್ಯೇಕ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಹಾಗೂ ವೈದ್ಯಕೀಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ.

ನಿಗಾ ಕಡ್ಡಾಯ: ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಉಗಾಂಡಾ ಹಾಗೂ ಕಾಂಗೋ ಸೇರಿದಂತೆ ಎಬೋಲಾ ಅಪಾಯ ಇರುವ ಆಫ್ರಿಕಾ ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರನ್ನು 21 ದಿನಗಳ ಕಾಲ ಆರೋಗ್ಯ ನಿಗಾದಲ್ಲಿಡಲಾಗುತ್ತದೆ.

ಪುಣೆಗೆ ರಕ್ತದ ಮಾದರಿ ರವಾನೆ: ಮೇ 25ರಂದು ಮಹಿಳೆಯ ರಕ್ತ ಹಾಗೂ ಇತರ ವೈದ್ಯಕೀಯ ಮಾದರಿಗಳನ್ನು ಸಂಗ್ರಹಿಸಿ, ಬೆಂಗಳೂರಿನ ರಾಷ್ಟ್ರೀಯ ವೈರಾಲಜಿ ಸಂಸ್ಥೆ ಘಟಕದ ಮೂಲಕ ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಪರೀಕ್ಷಾ ವರದಿ ಬುಧವಾರ ಲಭ್ಯವಾಗುವ ನಿರೀಕ್ಷೆಯಿದ್ದು, ವರದಿ ಬಂದ ಬಳಿಕ ಸೋಂಕು ದೃಢಪಟ್ಟಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಲಿದೆ.

ಮಹಿಳೆ ಬೆಂಗಳೂರಿಗೆ ಬಂದ ನಂತರ ಸಂಪರ್ಕಕ್ಕೆ ಬಂದಿರಬಹುದಾದ ವ್ಯಕ್ತಿಗಳನ್ನು ಗುರುತಿಸಿ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಂಪರ್ಕಿತರ ಆರೋಗ್ಯ ಸ್ಥಿತಿಯನ್ನೂ ಪರಿಶೀಲಿಸಲಾಗುತ್ತಿದೆ.

ಇದೀಗ ಸೋಂಕು ಕೇವಲ ಶಂಕಿತ ಹಂತದಲ್ಲಿದ್ದು, ಪರೀಕ್ಷಾ ವರದಿ ಬರುವವರೆಗೆ ಎಬೋಲಾ ಸೋಂಕು ದೃಢಪಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ