ಇಂಡೋನೇಷ್ಯಾದ ಮಧುರಾ ದ್ವೀಪದ ಕರಾವಳಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ಫೆರ್ರಿ (ಹಡಗು) ಅಗ್ನಿ ಅವಘಡದಲ್ಲಿ ಸುಮಾರು 5 ಮಂದಿ ಮೃತಪಟ್ಟಿದ್ದು, 41 ಜನರು ನಾಪತ್ತೆಯಾಗಿದ್ದಾರೆ. ಇನ್ನು ಆ ಹಡಗಿನಲ್ಲಿ ಕನಿಷ್ಠ 271 ಜನರಿದ್ದರು ಎನ್ನಲಾಗಿದೆ.

ಇಂಡೋನೇಷ್ಯಾದ ಮಧುರಾ ದ್ವೀಪದ ಬಳಿ, ಸುರಬಯಾದಿಂದ ಮಕಾಸ್ಸರ್‌ಗೆ ಪ್ರಯಾಣಿಸುತ್ತಿದ್ದ ಹಡಗಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹಡಗಿನಲ್ಲಿ ಸಿಬ್ಬಂದಿ ಸೇರಿ ಒಟ್ಟು 271 ಜನರಿದ್ದರು. ಅವರಲ್ಲಿ 225 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಇನ್ನು 5 ಜನರು ಸಾವನ್ನಪಿದ್ದು, 41 ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇನ್ನು ಮೃತರಲ್ಲಿ ಒಬ್ಬ ಗರ್ಭಿಣಿಯೂ ಇದ್ದರು ಎನ್ನಲಾಗಿದ್ದು, ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯ ಮುಂದುವರೆದಿದೆ.

ಹಡಗಿನ ಮೇಲ್ಭಾಗದ ಡೆಕ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪ್ರಾಣ ಉಳಿಸಿಕೊಳ್ಳಲು ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.

ಇಂಡೋನೇಷ್ಯಾದಲ್ಲಿ 17,000 ಕ್ಕೂ ಹೆಚ್ಚು ದ್ವೀಪಗಳಿರುವುದರಿಂದ ಸಂಚಾರಕ್ಕೆ ಹಡಗುಗಳನ್ನೇ ಹೆಚ್ಚಾಗಿ ಅವಲಂಬಿಸಲಾಗುತ್ತದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ