ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ವಿಮಾನಯಾನ ಕಾರ್ಯಾಚರಣೆಗೆ ಅಡ್ಡಿಯಾಗಿದ್ದರಿಂದ ಬುಧವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 34 ಅಂತರರಾಷ್ಟ್ರೀಯ ವಿಮಾನಗಳು ರದ್ದಾಗಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾರ್ಚ್ 4 ರಂದು ವಾಯುಪ್ರದೇಶ ನಿರ್ಬಂಧಗಳಿಂದಾಗಿ 18 ಆಗಮನ ಮತ್ತು 16 ನಿರ್ಗಮನ ವಿಮಾನಗಳು ರದ್ದಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ರದ್ದತಿಯಿಂದ ಅಬುಧಾಬಿ, ರಿಯಾದ್, ಜೆಡ್ಡಾ, ದಮ್ಮಾಮ್, ದುಬೈ ಮತ್ತು ದೋಹಾ ಸೇರಿದಂತೆ ಪಶ್ಚಿಮ ಏಷ್ಯಾದ ನಗರಗಳೊಂದಿಗೆ ಬೆಂಗಳೂರನ್ನು ಸಂಪರ್ಕಿಸುವ ಹಲವು ಪ್ರಮುಖ ಅಂತರರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾ.5ರಂದು ಸಂಚರಿಸಬೇಕಿದ್ದ 10ಕ್ಕೂ ಅಧಿಕ ವಿಮಾನಗಳು ರದ್ದುಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.

ಏತನ್ಮಧ್ಯೆ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್(ಬಿಐಎಎಲ್), ಪ್ರಯಾಣಿಕರಿಗೆ ಸಹಾಯ ಒದಗಿಸಲು ಟರ್ಮಿನಲ್ 2 ರ ಕರ್ಬ್‌ಸೈಡ್‌ನಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ