ಎಂಟನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎಫ್ಎ4ರ ಆರು ವಿಷಯಗಳ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ.
ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದ ರಾಮಾಂಜಿನಿ ಹಾಗೂ ಕವಿತಾ ದಂಪತಿಯ ಹಿರಿಯ ಪುತ್ರಿ ಹಿಮಾಬಿಂದು, ಪದ್ಮನಾಭ ಗುರೂಜಿ ಆನ್ಲೈನ್ನಲ್ಲಿ ನೀಡಿದ ಪಾಠಗಳ ಮೂಲಕ “ಗಾಂಧಾರಿ” ವಿದ್ಯೆ ಕಲಿತಿದ್ದಾಳೆ.
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸ್ಪರ್ಶ, ವಾಸನೆ ಹಾಗೂ ಶಬ್ದದಿಂದಲೇ ವ್ಯಕ್ತಿ ಹಾಗೂ ವಸ್ತುಗಳನ್ನು ಗುರುತಿಸುವ “ಗಾಂಧಾರಿ ಕಲೆ” ಕರಗತ ಮಾಡಿಕೊಂಡಿರುವ ಹಿಮಾಬಿಂದ ಈ ಪರೀಕ್ಷೆ ಬರೆದ ವಿದ್ಯಾರ್ಥಿನಿ.“ನನ್ನ ಮಗಳು ನಾಲ್ಕನೇ ತರಗತಿಯಲ್ಲಿದ್ದಾಗ ಕಲಿಕೆಯಲ್ಲಿ ಬಹಳ
ಹಿಂದುಳಿದಿದ್ದಳು. ಗಾಂಧಾರಿ ವಿದ್ಯೆ ಕಲಿಸಿದರೆ ಜ್ಞಾಪಕ ಶಕ್ತಿ ಹೆಚ್ಚುತ್ತದೆ. ಸದಾ ಕ್ರಿಯಾಶೀಲರಾಗಿ ಇರುತ್ತಾರೆ ಎಂದು ಸ್ನೇಹಿತರು ಸಲಹೆ ನೀಡಿದ್ದರಿಂದ ಈ ವಿದ್ಯೆ ಕಲಿಸಿದೆ. ಆ ನಂತರ ಆಕೆ ಕ್ಲಾಸ್ಗೆ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗುತ್ತಿದ್ದಾಳೆ” ಎಂದು ರಾಮಾಂಜಿನಿ ಅವರು ಸಂತಸ ಹಂಚಿಕೊಂಡಿದ್ದಾರೆ.
ಕುರುವಳ್ಳಿ ತಿಮ್ಮಪ್ಪ ಮೆಮೋರಿಯಲ್ ಸ್ಕೂಲ್ನಲ್ಲಿ ಹಿಮಾಬಿಂದು ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.





