ಮುಂಬರುವ ಬಹುನಿರೀಕ್ಷಿತ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆಗಳು ಬ್ಯಾಲೆಟ್‌ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್ ತಿಳಿಸಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಬಿಡುಗಡೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ಮಾತ್ರ ಇವಿಎಂ ಮಾಡಿದ್ದೇವೆ. ಬ್ಯಾಲೆಟ್‌ ಪೇಪರ್‌ನಲ್ಲಿ ಮಾಡಬಾರದು ಅಂತೇನಿಲ್ಲ. ಮುಂಬರುವ ಜಿಬಿಎ ಎಲೆಕ್ಷನ್‌, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಕೂಡ ಬ್ಯಾಲೆಟ್‌ ಪೇಪರ್‌ನಲ್ಲೇ ನಡೆಯಲಿದೆ ಎಂದರು.

ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದ ನಂತರ ಅಂದರೆ, ಮೇ 35ರ ನಂತರ ಜೆಬಿಎಗೆ ಚುನಾವಣೆ ನಿಗದಿಯಾಗಲಿದೆ ಎಂದು ತಿಳಿಸಿದರು.ಮೇ ಅಥವಾ ಜೂನ್‌ ನಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ನಡೆಸಬೇಕು ಎಂದುಕೊಂಡಿದ್ದೇವೆ. ಡಿ ಲಿಮಿಟೇಷನ್ ರಿಪೋರ್ಟ್ ಸರ್ಕಾರ ನಮಗೆ ಸಲ್ಲಿಸಬೇಕಿದೆ. ಜನವರಿ 30ಕ್ಕೆ ಕೋರ್ಟ್ ಅಲ್ಲಿ ಒಂದು ಪಿಟಿಷನ್ ಇದೆ. ಅದು ಆದ ಬಳಿಕ ಮಾಡಬೇಕು ಅಂತಾ ಇದ್ದೇವೆ. ಗ್ರಾಮ ಪಂಚಾಯ್ತಿ ಚುನಾವಣೆ ಕೂಡ ಮಾಡಬೇಕು ಅಂತಿದ್ದು, ಅದೂ ಬ್ಯಾಲೆಟ್‌ ಪೇಪರ್‌ನಲ್ಲೇ ಇರುತ್ತದೆ. ಸಾಕಷ್ಟು ಜನ ಬ್ಯಾಲೆಟ್‌ನಲ್ಲಿ ಮಾಡಿ, ಇವಿಎಂನಲ್ಲಿ (EVM) ಮಾಡಿ ಅಂತ ಪತ್ರ ಬರೆದಿದ್ರು. ಆದರೆ ಬ್ಯಾಲೆಟ್‌ ಸೂಕ್ತ ಅನ್ನಿಸಿದೆ ಎಂದು ವಿವರಿಸಿದರು.

ಕಳೆದ 20-30 ವರ್ಷಗಳಿಂದ ಚುನಾವಣೆಗಳಲ್ಲಿ ಇವಿಎಂ ಬಳಸಲಾಗುತ್ತಿದೆ. ಆದರೆ, ಅದಕ್ಕೂ ಮುನ್ನ ಮತಪತ್ರಗಳನ್ನೇ ಬಳಸಲಾಗುತ್ತಿತ್ತು. ಕಾನೂನು ಅಥವಾ ಸುಪ್ರೀಂಕೋರ್ಟ್​ ಪ್ರಕಾರ ಮತಪತ್ರ ಬಳಸಲು ಯಾವುದೇ ಆಕ್ಷೇಪವಿಲ್ಲ ಎಂದರು.

88,91,411 ವೋಟರ್ಸ್‌: ಇನ್ನೂ ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ ಎಂದು ಮಾಹಿತಿ ನೀಡಿದರು.

ಜಿಬಿಎ ನಗರ ಪಾಲಿಕೆಗಳ ಚುನಾವಣೆಗೆ 2025ರ ಅಕ್ಟೋಬರ್ 1 ನ್ನು ಆಧಾರವಾಗಿ ತೆಗೆದುಕೊಂಡು ಸಿದ್ಧಪಡಿಸಲಾದ ಕರಡು ಮತದಾರರ ಪಟ್ಟಿಯಲ್ಲಿ 45,69,193 ಪುರುಷರು, 43,20,583 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿದಂತೆ, ಒಟ್ಟು 88,91,411 ಮತದಾರರು ಇದ್ದಾರೆ. ಜನವರಿ 20 ರಿಂದ ಫೆಬ್ರವರಿ 3 ರವರೆಗೆ ಬೂತ್ ಲೆವಲ್ ಅಧಿಕಾರಿಗಳು (ಬಿ.ಎಲ್.ಓ) ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹಕ್ಕು ಹಾಗೂ ಆಕ್ಷೇಪಣೆಗಳ ವಿಲೇವಾರಿಯು ನಡೆಯಲಿದ್ದು, ಮಾರ್ಚ್ 16 ರಂದು ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ ಮಾಡಲಾಗುವುದು ಎಂದು ವಿವರಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ