ರಾಜ್ಯದ 'ಗೃಹಲಕ್ಷ್ಮೀ'ಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಮೂರು ತಿಂಗಳ ಹಣವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಹೌದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಕೂಡ ಒಂದು. ಗೃಹಲಕ್ಷ್ಮೀ ಹಣ ಪ್ರತೀ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ. ಆದರೆ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಹಣ ಜಮಾವಣೆಯಾಗಿಲ್ಲ. ಇದರಿಂದಾಗಿ ಅದೆಷ್ಟೋ ಜನ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ಈ ಹಣವನ್ನು ಬಿಡುಗಡೆ ಮಾಡುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಅಂದಹಾಗೆ ಗೃಹಲಕ್ಷ್ಮೀ ಹಣ ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳು ಫಲಾನುಭವಿಗಳಿಗೆ ತಲುಪಿಲ್ಲ. ಈ ಕಂತಿನ ಹಣದಿಂದ ಮನೆ ನಡೆಸುವ ಅದೆಷ್ಟೋ ಫಲಾನುಭವಿಗಳು ಹಣ ಬರದೇ ಇದ್ದರಿಂದ ಬೇಸರ ಹಂಚಿಕೊಂಡಿದ್ದರು. ಗೃಹಲಕ್ಷ್ಮೀ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಕೂಡ ಮಾಡಿದ್ದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ ಕಂತಿನ ಹಣವನ್ನು ಮೇ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗುವುದು. ಬಾಕಿ ಉಳಿದ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಇನ್ನೆರೆಡು ತಿಂಗಳ ಹಣವನ್ನು ಗೃಹಲಕ್ಷ್ಮೀ ಖಾತೆಗೆ ಜಮ ಮಾಡಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.