ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಇರುವಂತೆ ವ್ಯವಸ್ಥೆ ಮುಂದುವರೆಯುತ್ತದೆ ಎಂದು ಹೇಳಿದರು.

ಈ‌ಗಾಗಲೇ ಏಪ್ರಿಲ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದರು. ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ‌. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಗೃಹ ಲಕ್ಷ್ಮೀ ಯೋಜನೆಯು ಕರ್ನಾಟಕದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವ ಗುರಿ ಹೊಂದಿದ್ದು, ಈ ಯೋಜನೆಯಡಿ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಜಮೆ ಮಾಡಲಾಗುತ್ತದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ