ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಂಡಿದ್ದಾರೆ.

2023ರ ಜುಲೈನಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.

ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಈ ಕೆಳಗಿನ ದಾಖಲೆಗಳನ್ನು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ವಿನಂತಿಸಿದೆ. ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ.

ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ.

ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ