ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದು 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
18 ವರ್ಷದ ಬಾವರಸಿಂಗ್ ರಜಪೂತ್ ಮೃತ ಪ್ರಯಾಣಿಕ. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾವೇರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಪಲ್ಟಿಯಾಗಿದ್ದ ಖಾಸಗಿ ಬಸ್‌ನ್ನು ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





