ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರ ದಿನೇ ದಿನೇ ನೋಡ ನೋಡುತ್ತಲೇ ಬೆಳೆಯುತ್ತಲೇ ಹೊದಂತೆಲ್ಲಾ, ನಗರದ ಹಿಂದಿನ  ಎಲ್ಲದರ ಮೌಲ್ಯವನ್ನು ಕೇವಲ ಹಣದ ರೂಪದಲ್ಲಿ ಮಾತ್ರವೇ ಅಳೆಯಲಾರಂಭಿಸಿದರು. ಬೆಂಗಳೂರಿನ ಪರಂಪರೆ, ಇತಿಹಾಸ ಅಥವಾ ಸಂಸ್ಕೃತಿಗೆ ಯಾವುದೇ ಮೌಲ್ಯವಿಲ್ಲದೇ, ಎಲ್ಲವೂ ರಿಯಲ್ ಎಸ್ಟೇಟ್ ಮುಂದೆ ಅಡಿಯಾಳಾಗಿ ತಲೆಬಗ್ಗಿಸಿ  ಒಂದೊಂದೇ ಕಳೆದು ಹೋಗಿರುವುದು ನಿಜಕ್ಕೂ ಬೇಸರದ ಸಂಗತಿ. ಹಿಂದಿನ ಕಲೆ ಮತ್ತು ಇತಿಹಾಸದ ಪ್ರತೀಕವಾಗಿದ್ದಂತಹ ಒಂದೊಂದೇ ಕಟ್ಟಡಗಳು ನೆಲ್ಲಕ್ಕುರುಳಿಸಿ ಆ ಜಾಗದಲ್ಲಿ ಬಹುಮಹಡಿ ಗಗನ ಚುಂಬನ ಕಟ್ಟಡಗಳು ಏಳಿಸುವುದನ್ನೇ ನಗರಾಭಿವೃಧ್ಧಿ ಎಂದೇ ಎಲ್ಲರೂ ಭಾವಿಸಿರುವುದು ನಿಜಕ್ಕೂ ದುಃಖಕರವೇ ಸರಿ. ಬೆಂಗಳೂರಿನ ಹೃದಯಭಾಗ ಎನಿಸಿಕೊಂಡಿರುವ ಅಂದಿಗೂ ಇಂದಿಗೂ ಬೆಂಗಳೂರಿನ ವೈಭವೋಪೇತ ಭಾಗವೇ ಆಗಿರುವ ಎಂ.ಜಿ ರಸ್ತೆಯ ವೃತ್ತದಲ್ಲಿದ್ದ ಕಾವೇರಿ ಎಂಪೋರಿಯಂ ಪಕ್ಕದಲ್ಲಿದ್ದ ಬೃಂದಾವನ್ ಹೋಟೆಲ್ಲಿನ ಗತವೈಭವದ ಇತಿಹಾಸದ ಬಗ್ಗೆ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ  ಮೆಲುಕು ಹಾಕೋಣ. ಬೆಂಗಳೂರು ಇತಿಹಾಸದ ಹಿಂದಿನ ಮಾಲಿಕೆಗಳನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಕೆಲ ದಿನಗಳ ಹಿಂದೆ  ಮುಖಮುಟವನ್ನು ನೋಡುತ್ತಿದ್ದಾಗ ಫೇಸ್ ಬುಕ್ಕಿನಲ್ಲಿ ಯಾರೋ ಪುಣ್ಯಾತ್ಮರು 2012ರಲ್ಲಿ ಮುಚ್ಚಿಹೋದ ಬೃಂದಾವನ್ ಹೋಟೆಲ್ ಒಂದರ ಫೋಟೋವೊಂದನ್ನು ನೋಡಿದೆ. ಕೇವಲ ಫೋಟೋವೊಂದನ್ನು ಹಾಕಿದ್ದಕ್ಕೇ ಸರಿ ಸುಮಾರು  400ಕ್ಕೂ ಹೆಚ್ಚು ಮಂದಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು ಎಂದರೆ  ಆ ಹೋಟೆಲ್ಲಿನ ಖ್ಯಾತಿ ಎಷ್ಟಿತ್ತು ಎಂಬುದರ ಅರಿವಾಗುತ್ತದೆ. ತೊಂಬ್ಬತ್ತು ಮತ್ತು ಎರಡು ಸಾವಿರದ ದಶಕದಲ್ಲಿ ಆ ಹೋಟೆಲ್ಲಿನಲ್ಲಿ ಗ್ರಾಹನಾಗಿ ಅಲ್ಲಿನ ಊಟವನ್ನು ಸವಿದಿದ್ದ ಕಾರಣ ಬೃಂದಾವನ್ ಹೋಟೆಲ್ ಕುರಿತಂತೆ ಕೆಲವೊಂದು ಸವಿ ಸವಿ ನೆನಪುಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಬಯಕೆಯಾಗಿದೆ.

ಕರ್ನಾಟಕದ ಕರಾವಳಿ ಪ್ರಾಂತದ ಉಡುಪಿಯ ಮೂಲದವರಾದ ಶ್ರೀ ರಾಮಕೃಷ್ಣ ರಾವ್ ಅವರು ತಮ್ಮ ಕೆಲಸವನ್ನರಸಿ ದೂರದ ಮದ್ರಾಸಿಗೆ ಹೋಗಿ ಅಲ್ಲಿ ಹೋಟೆಲ್ಲಿನಲ್ಲಿ ಕೆಲಸವನ್ನಾರಂಭಿಸಿ ಕಡೆಗೆ ತಮ್ಮದೇ ಹೋಟೆಲ್ಲೊಂದನ್ನು ಆರಂಭಿಸಿ ಅಲ್ಪ ಸ್ವಲ್ಪ ಹಣವನ್ನು ಗಳಿಸುತ್ತಾರೆ. ದೂರದ ಮದ್ರಾಸಿಗಿಂತಲೂ ತಮ್ಮ ಕರ್ನಾಟಕದಲ್ಲೇ ಹೋಟೆಲ್ಲೊಂದನ್ನು ಏಕೆ ಅರಂಭಿಸಬಾರದು? ಎಂದು ಯೋಚಿಸುತ್ತಿರುತ್ತಾರೆ. ಬೆಂಗಳೂರಿನ ಕಂಟೋನ್ಮೆಂಟ್ ಭಾಗವಾಗಿದ್ದ ಬಹುತೇಕ  ಬ್ರಿಟೀಷರ ಸಂಸ್ಕೃತಿಯನ್ನೇ ಅಳವಡಿಸಿಕೊಂಡಿದ್ದ ಇಂದಿನ ಮಹಾತ್ಮಾಗಾಂಧಿ ರಸ್ತೆಯಲ್ಲಿ ಉತ್ತಮವಾದ ದಕ್ಷಿಣ ಭಾರತ ಸಸ್ಯಾಹಾರಿ ಹೋಟೆಲ್ ಇಲ್ಲದಿದ್ದದ್ದನ್ನು ಗಮನಿಸಿ 1967 ರಲ್ಲಿ ತಮ್ಮ ಕುಟುಂಬಸ್ಥರೊಡನೆ ಹೋಟೆಲ್  ಬೃಂದಾವನವನ್ನು ಸ್ಥಾಪಿಸುತ್ತಾರೆ. ಆರಂಭದಲ್ಲಿ ಕೇವಲ ರೆಸ್ಟೋರೆಂಟ್ ಆರಂಭಿಸಿ ನಂತರ ಅಲ್ಲಿಯೇ ದೂರದ ಊರಿನಿಂದ ಬೆಂಗಳೂರಿಗೆ ಬಂದು ಉಳಿದುಕೊಳ್ಳುವವರಿಗೆ ಅನುಕೂಲವಾಗುವಂತೆ ಕೊಠಡಿಗಳನ್ನೂ ನಿರ್ಮಿಸುತ್ತಾರೆ.

ಅಂದೆಲ್ಲಾ ಈಗಿನಂತೆ ಐಶಾರಾಮಿ ಹೋಟೆಲ್ಲುಗಳು ಇಲ್ಲದಿದ್ದ ಕಾರಣ, ಬೆಂಗಳೂರಿನ ಅಂದಿನ ಕಾಲದ ಅನೇಕ ಭೂಗತ ಲೋಕದ ಡಾನ್ ಗಳು ಇದೇ ಹೋಟಿಲ್ಲಿನಲ್ಲಿಯೇ ತಮ್ಮ ವ್ಯವಹಾರಗಳನ್ನು ಮಾಡುತ್ತಿದ್ದರಂತೆ. ಅದರಲ್ಲೂ ಕರಾವಳಿ ಮೂಲದ ಅಂಡರ್ವರ್ಲಡ್ ಡಾನ್ ಮುತ್ತಪ್ಪ ರೈಗೂ ಸಹಾ ಹೋಟೇಲ್ ಬೃಂದಾವನ್ ಮೆಚ್ಚಿನ ತಾಣವಾಗಿತ್ತು. ಅದೇ ರೀತಿಯಲ್ಲಿ ಆಗಿನ್ನೂ ಶಾಸಕರ ಭವನ ಇಲ್ಲದಿದ್ದಾಗ, ವಿಧಾನ ಸೌಧಕ್ಕೆ ಬಹಳ ಹತ್ತಿರವಿದ್ದ ಕಾರಣ, ಬಳ್ಳಾರಿ, ಮಡಿಕೇರಿ, ಮಂಗಳೂರಿನ ಭಾಗದ ಬಹುತೇಕ ಹಿರಿಯ ರಾಜಕಾರಣಿಗಳು ಹೊಟೇಲ್ ಬೃಂದಾವನ್ ನಲ್ಲಿಯೇ ವಾಸ್ತವ್ಯ ಹೂಡುತ್ತಿದ್ದರಂತೆ. ಇನ್ನು ಕರ್ನಾಟಕದ ಬಹುತೇಕ ಅಣೆಕಟ್ಟುಗಳ ನಿರ್ಮಾಣದ ಹೊಣೆಯನ್ನು ಹೊತ್ತಿದ್ದ ರೆಡ್ಡಿಗಳಿಗೂ ಸಹಾ ಬೃಂದಾವನ್ ಹೋಟೇಲ್ ಮೆಚ್ಚಿನ ವಾಸ್ತವ್ಯದ ತಾಣವಾಗಿತ್ತು ಎಂದು ಅಲ್ಲಿಯೇ ಕೆಲಸ ಮಾಡುತ್ತಿದ್ದ ಸಿಬ್ಬಂಧಿಯೊಬ್ಬರು ನೆನಪಿಸಿಕೊಂಡರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ